ದಲಿತ ಮುಖಂಡ ಶ್ಯಾಮ ನಾಟೀಕಾರಗೆ ಎಂಎಲ್‍ಸಿ ಸ್ಥಾನ ನೀಡುವಂತೆ ಆಗ್ರಹ

ಕಲಬುರಗಿ: ಜೂ.13:ಮಾದಿಗ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ನಾಯಕರಾದ ಶ್ಯಾಮ ನಾಟೀಕಾರ ಅವರಿಗೆ ಎಂಎಲ್ಸಿ ಸಚಿವ ಸ್ಥಾನ ನೀಡಬೇಕು ಎಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಗಲಿರುಳು ಎನ್ನದೇ ಸಾಕಷ್ಟು ಸೇವೆಯನ್ನು ಸಲ್ಲಿಸಿರುತ್ತಾರೆ. ಪ್ರತಿಯೊಂದು ಚುನಾವಣೆಗಳಲ್ಲಿ ಪ್ರಚಾರ ಕಾರ್ಯಗಳಲ್ಲಿ, ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿರುತ್ತಾರೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅವಿರತ ಸೇವೆ ಸಲ್ಲಿಸಿರುತ್ತಾರೆ.ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಮಾದಿಗ ಟಿಕೆಟ್ ನೀಡುವಲ್ಲಿ ವಿಫಲವಾಗಿತ್ತು.ಇದರಿಂದ ಮಾದಿಗ ಸಮಾಜದ ಮತದಾರರು ಗಾಬರಿಗೊಂಡ ಪ್ರಯುಕ್ತ ಮಾದಿಗ ಸಮಾಜದ ಮುಖಂಡ ಶ್ಯಾಮ ನಾಟೀಕಾರ ಅವಯ ಸಮಾಜವನ್ನು ಒಗ್ಗೂಡಿಸಿ ಕಾಂಗ್ರೆಸ್‍ಗೆ ಮತ ಹಾಕುವಂತೆ ಮನವರಿಕೆ ಮಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುವ ಮೂಲಕ ಮಾದಿಗ ಸಮಾಜಕ್ಕೆ ಇವರ ಕೊಡುಗೆ ಅಪಾರವಾಗಿದ್ದು, ಈ ಹಿಂದೆ ಕರ್ನಾಟಕ ಸರ್ಕಾರ ಮಹಾನಗರ ಪಾಲಿಕೆಯಲ್ಲಿ ಯಾವುದೇ ಸ್ಥಾನಮಾನ ಅವಕಾಶ ನೀಡಿರುವುದಿಲ್ಲ.ಕಾಂಗ್ರೆಸ್ ಪಕ್ಷಕ್ಕೆ ಪ್ರಾರಂಭದಿಂದಲೂ ಮತ್ತು ಈ ಬಾರಿ ಗೆಲುವಿಗೆ ಹೆಚ್ಚಿನ ಬೆಂಬಲ ನೀಡಿರುವ ದಲಿತ ಸಮುದಾಯ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇಲ್ಲಿ ದಲಿತ ಸಮುದಾಯದ ಎಂ.ಎಲ್.ಸಿ ಪ್ರತಿನಿಧಿಗಳಿಲ್ಲದಿರುವ ಕಾರಣ ದಲಿತ ಸಮುದಾಯದ ಮುಖಂಡ ಶ್ಯಾಮ ನಾಟೀಕಾರ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಮೀಸಲಾಗಿರುವ ಎಂ.ಎಲ್.ಸಿಯಾಗಿ ನಾಮಕರಣ ಮಾಡುವುದರಿಂದ ಮುಂಬರುವ ಲೋಕಸಭೆ, ಜಿಪಂ ಹಾಗೂ ತಾಪಂ ಮುಂತಾದ ಚುನಾವಣೆಗಳಲ್ಲಿ ಹೆಚ್ಚಿನ ಗೆಲುವಿಗೆ ಸಹಕಾರಿಯಾಗುತ್ತಾರೆ ಎಂದರು.