
ಕಲಬುರ್ಗಿ,ಮಾ,03: ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದಿಂದ ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆ ನಿಮಿತ್ಯ ನಾಡಿನ ಎಲ್ಲಾ ಸಮುದಾಯದ ವಿದ್ಯಾರ್ಥಿ, ಯುವಜನರಿಗಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕುರಿತು ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಲಾಗಿದ್ದು ಇಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಜಂಟಿ ನಿರ್ದೇಶಕರು ಪರೀಕ್ಷೆಯಲ್ಲಿ ರಾಂಕ್ ಪಡೆದ ವಿಜೇತರಿಗೆ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಗೌರವಿಸಿ ಬಹುಮಾನ ವಿತರಿಸುವ ಪೆÇಸ್ಟರ ಬಿಡುಗಡೆ ಮಾಡಿ ಮಾತನಾಡಿದರು. ಎಲ್ಲಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಹಾಗೂ ವಸತಿ ನಿಲಯ ಮೇಲ್ವಿಚಾರಣೆ ಅಧಿಕಾರಿಗಳಿಗೆ ಆದೇಶದ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಅದಿನದಲ್ಲಿ ಬರುವ ವಸತಿ ಶಾಲೆಗಳಿಗೆ ಹಾಗೂ ಕಾಲೇಜುಗಳಿಗೆ ಸೂಚಿಸುವುದಾಗಿ ಹೇಳಿದರು. ಈ ವೇಳೆಯಲ್ಲಿ ಕಲಬುರಗಿ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ ಎಸ್ ಕಟ್ಟಿಮನಿ ಇದ್ದರು.