ದಲಿತ ವೇದಿಕೆ ಆಗ್ರಹ

ಕೆ.ಆರ್.ಪುರ,ಆ.೨- ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗಾಂಧೀಜಿ ಅವರ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲ್ಲೂ ಕು ಕಚೇರಿಯ ಡಾ. ಅಂಬೇಡ್ಕರ್ ಪುತ್ಥಳಿ ಬಳಿ ಜಾಗೃತಿ ಚಳುವಳಿ ನಡೆಸಿದರು.
ಚಳವಳಿಯ ನೇತೃತ್ವ ವಹಿಸಿದ್ದ ಕರ್ನಾಟಕ ದಲಿ ತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸೋರುಣಸೆ ವೆಂಕಟೇಶ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರಲ್ಲಿ ಡಾ. ಅಂಬೇಡ್ಕರ್ ಸಹ ಒಬ್ಬರು. ನಮ್ಮ ದೇಶಕ್ಕೆ ಭವ್ಯ ಸಂವಿಧಾನ ನೀಡಿದ ಡಾ.ಅಂಬೇಡ್ಕರ್ ರವರ ಭಾವಚಿತ್ರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಇಟ್ಟು ಅರ್ಥ ಪೂರ್ಣವಾಗಿ ಆಚರಿಸಬೇಕು. .ಖಾಸಗಿ ಶಾಲೆಗಳಲ್ಲಿ ಹಾಗೂ ಕೆಲ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ. ನಮ್ಮ ಸಂಘಟನೆ ವತಿಯಿಂದ ಒಂದು ಸಾವಿರ ಭಾವಚಿತ್ರಗಳನ್ನು ಈಗಾಗಲೇ ವಿತರಣೆ ಮಾಡಿದ್ದೇವೆ ಎಂದರು.
ಮಣಿಪುರದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಅತ್ಯಾಚಾರ ಮಾಡಿರುವುದು ಖಂಡನೀಯ, ಹೆಣ್ಣಿಗೆ ಮಾಡಿರುವ ಅವಮಾನ ದೇಶಕ್ಕೆ ಮಾಡಿರುವ ಅವಮಾನ, ಆರೋಪಿಗಳನ್ನು ಗಲ್ಲಿಗೇರಿಸಬೇಕು, ಪ್ರಧಾನಿ ಮೌನ ಏಕೆ ಆಕ್ಷನ್ ತೆಗೆದುಕೊಳ್ಳಬೇಕು, ಅಮೀತ್ ಶಾ ಅವರು ಘಟನೆ ನಡೆದ ಜಾಗಕ್ಕೆ ಭೇಟಿ ಕೊಟ್ಟು ಸಮಸ್ಯೆ ಆಲಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಪೂರ್ವ ತಾಲ್ಲೂಕು ತಹಶಿಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಶಿಲ್ದಾರ್ ವೈ.ರವಿ ರವರು ಮಾತನಾಡಿ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಲ್ಲದೆ ಬರುವ ಸ್ವಾತಂತ್ರ್ಯ ದಿನಾಚರಣೆ ದಿನ ಎಲ್ಲಾ ಕಡೆ ಡಾ.ಅಂಬೇಡ್ಕರ್ ಭಾವಚಿತ್ರ ಇಡಲು ಸೂಚನೆ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಜಯಕುಮಾರ್, ರಾಜ್ಯ ಯುವ ಅಧ್ಯಕ್ಷ ವಿಜಯ್ ಕುಮಾರ್, ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಸತ್ಯವತಿ, ಕಾರ್ಯಾಧ್ಯಕ್ಷ ರಾಮಕೃಷ್ಣ, ನಗರ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.