ದಲಿತ ಸಂಘರ್ಷ ಜಿಲ್ಲಾ ಸಮಿತಿಗೆ ಚಾಲನೆ

ದಾವಣಗೆರೆ.ಏ.೧೬; ಕರ್ನಾಟಕ ದಲಿತ ಸಂಘರ್ಷ  ಜಿಲ್ಲಾ ಸಮಿತಿಯ ಉದ್ಘಾಟನಾ ಸಮಾರಂಭವು ನಗರದ ಶಿಬಾರ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ನಡೆಯಿತು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ ನೇ ಜನ್ಮದಿನಾಚರಣೆಯ ಅಂಗವಾಗಿ ಕರೋನಾ ವಾರಿಯರ್ಸ್‌ಗಳಾದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರುಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.ಸಮಿತಿಯ ಜಿಲ್ಲಾಧ್ಯಕ್ಷ ಹೆಚ್. ರಾಮಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಮೇಯರ್ ಎಸ್.ಟಿ. ವೀರೇಶ್, ಪ್ರಾಧ್ಯಾಪಕ ಡಾ.ಹೆಚ್. ವಿಶ್ವನಾಥ್, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸಿ.ಹಾಲಪ್ಪ, ಪಿಎಸ್‌ಐ ಕೃಷ್ಣಪ್ಪ, ಜೆಡಿಎಸ್ ಮುಖಂಡ ಜೆ. ಅಮಾನುಲ್ಲಾ ಖಾನ್ ಅವರು ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು.