ದಲಿತ ಸಮುದಾಯದ ಜನಾಂಗಕ್ಕೆ ಮುಖ್ಯಮಂತ್ರಿ ಸ್ಥಾನ ಕೊಡಲು ಸಂಜೀವಪ್ಪ ಚಲುವಾದಿ ಆಗ್ರಹ

ಲಿಂಗಸುಗೂರು,ಮೇ.೧೭- ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರು ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಡಲು ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವಪ್ಪ ಚಲುವಾದಿ ಹುನಕುಂಟಿ ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ನಾಯಕರಿಗೆ ದಲಿತರಿಗೆ ರಾಜಕೀಯ ಮೀಸಲಾತಿ ಪ್ರಕಾರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪ್ರಕಾರ ತುಳಿತಕ್ಕೊಳಗಾದ ದಲಿತ ಅಸ್ಪುಶ್ಯರಿಗೆ ಮುಖ್ಯಮಂತ್ರಿ ಸ್ಥಾನ ಕೊಡಲು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಹುಮತ ಬರಬೇಕಾದರೆ ದಲಿತರ ಕೊಡುಗೆ ಅಪಾರವಾಗಿದೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಶ್ನಾತೀತ ನಾಯಕ ಡಾ ಜಿ ಪರಮೇಶ್ವರ್ ಪ್ರಿಯಾಂಕಾ ಖರ್ಗೆ ಇವರು ಬಲಗೈ ಸಮುದಾಯದ ಪ್ರಭಾವಿ ನಾಯಕರು ಮತ್ತು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಜೀವವನ್ನೇ ಮುಡಿಪಾಗಿಟ್ಟ ತಾಯಿಯಂತೆ ಪ್ರೀತಿಸುವ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕಲ್ಪಿಸಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕು ಎಂದು ಸಂಜೀವಪ್ಪ ಛಲವಾದಿ ಹೇಳಿದರು.
ಈ ಸಲ ೨೦೨೩ರ ಚುನಾವಣೆಯಲ್ಲಿ ಛಲವಾದಿ ಸಮಾಜದ ೧೧ಜನ ನಾಯಕರು ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಮಾಜದ ಗೌರವ ತಂದುಕೊಟ್ಟ ನಾಯಕರಾಗಿ ಹೊರಹೊಮ್ಮಿದ್ದಾರೆ .
ಇದರಿಂದಾಗಿ ಈ ಸಮಾಜಕ್ಕೆ ಕನಿಷ್ಠ ನಾಲ್ಕು ಜನರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಕೊಡಲು ಹೈಕಮಾಂಡ್ ಮುಂದಾಗಬೇಕು ಎಂದರು.
ಕೂಡಲೇ ಕಾಂಗ್ರೆಸ್ ಹೈಕಮಾಂಡ್ ದಲಿತರ ಬಗ್ಗೆ ತಾತ್ಸಾರ ಮನೋಭಾವ ತಾಳದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಮುಂದಾಗಬೇಕಾದರೆ ಮೊದಲು ಛಲವಾದಿ ಜನಾಂಗಕ್ಕೆ ರಾಜಕೀಯ ಅಧಿಕಾರ ಹಿಡಿಯಲು ಸಚಿವ ಸ್ಥಾನ ನೀಡಬೇಕು ಎಂಬುದು ಸಮುದಾಯದ ಮುಖಂಡರ ಆಗ್ರಹವಾಗಿದೆ.
ದಲಿತ ಸಿಎಂ ವಿಚಾರ ಬಂದಾಗ ಮಾತ್ರ ಎಲ್ಲರೂ ಒಟ್ಟಾಗಿ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಲು ಮುಂದಾಗಬೇಕು ಎಂದು ಸಂಜೀವಪ್ಪ ಹೇಳಿದರು ಕೇವಲ ಚುನಾವಣೆಯಲ್ಲಿ ಪ್ರಚಾರದಲ್ಲಿ ಸಮುದಾಯ ಮುಖಂಡರನ್ನು ದುಡಿಸಿಕೊಂಡು ನಮ್ಮನ್ನು ಕಡೆಗಣಿಸಲಾಗಿದೆ ಆದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಇಂದಿಗೂ ದಲಿತ ಅಸ್ಪುಶ್ಯರು ಜನಾಂಗದವರಿಗೆ ಮುಖ್ಯಮಂತ್ರಿ ಸ್ಥಾನ ಕೊಡದಿರುವುದು ಖೇದಕರ ಸಂಗತಿಯಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಿರುವ ವದು ಸ್ವಾಗತ ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿರುವುದು ಜನರಿಗೆ ಮನರಂಜನೆಯಾಗಿದೆ ಇದರಿಂದಾಗಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಲ್ಲಿ ಒಬ್ಬರಾದ ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ರವರಿಗೆ ಮತ್ತು ಪ್ರಿಯಾಂಕಾ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಕಲ್ಪಿಸಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವಪ್ಪ ಚಲುವಾದಿ ಹುನಕುಂಟಿ ಇವರು ಎಐಸಿಸಿ ಅಧ್ಯಕ್ಷರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.