ದಲಿತ ಸಾಹಿತ್ಯ ಪರಿಷತ್ : ಸಂವಾದ ಕಾರ್ಯಕ್ರಮ

ರಾಯಚೂರು.ನ.೨೦- ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ವತಿಯಿಂದ ಖ್ಯಾತ ಸಾಹಿತಿಗಳು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಮೂಡ್ನಾಕೂಡು ಚಿನ್ನಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಇಂದು ಸಂಜೆ ೫ ಘಂಟೆಗೆ ನಗರದ ಸರಕಾರಿ ನೌಕರರ ಎನ್‌ಜಿಓ ಭವನ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಲ್ಲಿ ಏರ್ಪಡಿಸಲಾಗಿದೆ.
ಸಂವಾದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಗತಿಪರ ಚಿಂತಕರು, ಸಾಹಿತಿಗಳು, ಕವಿ ಸಾಹಿತ್ಯಾಸಕ್ತರು ಭಾಗವಹಿಸಿ ಯಶಸ್ಸುಗೊಳಿಸಲು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ತಾಯರಾಜ್ ಮರ್ಚೆಟ್ಹಾಳ್ ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.