ದಶಪಥ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಂಡ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಯಲ್ಲಿ ಇಂದಿನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಿಸಿಲು ಆರಂಭಿಸಿರುವುದನ್ನು ಖಂಡಿಸಿ ಕಣಮಿಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್‌ ಗಳ ಬಳಿ ವಾಹನ ಸವಾರರು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ  ಟೋಲ್‌ ಪ್ಲಾಜಾಗಳ ಬಳಿ ಬಿಗಿವಿನ ವಾತಾವರಣ ನಿರ್ಮಾಣವಾಗಿದ್ದು, ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ.