ದಶಪಥ ಹೆದ್ದಾರಿಯಲ್ಲಿ ಕಾರು ಪಲ್ಟಿ ಮೂವರಿಗೆ ಗಾಯ

ಮಂಡ್ಯ, ಮಾ.12- ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ಪ್ರಧಾನಿಯಿಂದ ಉದ್ಘಾಟನೆಯಾದ ದಿನವೇ ಕಾರು ಅಪಘಾತ ಸಂಭವಿಸಿ ಮೂವರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್‌ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.