ದಸರಾ ಉದ್ಘಾಟನೆಗೆ ಮೋದಿ ಬರಲ್ಲ;ಎಸ್.ಟಿ.ಸೋಮಶೇಖರ್

ಮೈಸೂರು, ಸೆ.೧೭-ಅದ್ಧೂರಿಯಾಗಿ ನಡೆಯುವ ಮೈಸೂರು ದಸರಾ ಜಂಬೂಸವಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆಗೆ ಬರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿಯವರು ಬರಲಿದ್ದಾರೆಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದವ ಬೆನ್ನಲ್ಲೇ ಸಚಿವರಿಂದ ಈ ಹೇಳಿಕೆ ಹೊರಬಿದ್ದಿದೆ.
ಮೈಸೂರು ದಸರಾದಲ್ಲಿ ಭಾಗವಹಿಸಲಿರುವ ಗಣ್ಯರ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರನ್ನು ಅರಮನೆಯ ಭೇಟಿ ಬಗ್ಗೆ ಈಗಾಗಲೇ ಕೇಳಲಾಗಿದೆ. ಆದರೆ ಇನ್ನೂ ರಾಷ್ಟ್ರಪತಿಗಳಿಂದ ಅಧಿಕೃತ ಒಪ್ಪಿಗೆ ಸಿಕ್ಕಿಲ್ಲ ಎಂದು ತಿಳಿಸಿದರು.
ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರದ ೪ ಮಂತ್ರಿಗಳು ಬರುವ ಸಾಧ್ಯತೆ ಇದೆ. ಅದರ ಆಧಾರದ ಮೇಲೆ ವೇದಿಕೆ ಮೇಲೆ ಕುಳಿತುಕೊಳ್ಳುವವರ ಪಟ್ಟಿ ಅಂತಿಮಗೊಳ್ಳುತ್ತದೆ ಎಂದರು.
ದಸರಾಗೆ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಹಣ ಬಿಡುಗಡೆ ಮಾಡಿರುವುದಾಗಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದ್ಯುತ್ ದೀಪಾಲಂಕಾರಕ್ಕೆ ೪.೫ ಕೋಟಿ ರೂ. ನಿಗದಿ ಮಾಡಲಾಗಿದೆ. ಎಲ್ಲವನ್ನೂ ವ್ಯವಸ್ಥಿತವಾಗಿ ಮಾಡುತ್ತೇವೆ ಎಂದು ಸೋಮಶೇಖರ್ ಹೇಳಿದರು.