ದಸರಾ ಉದ್ಘಾಟನೆ : ಸಿದ್ಧತೆ ಪರಿಶೀಲನೆ

ಮೈಸೂರು,ಸೆ೧೮:ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭಾನುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ವೇದಿಕೆ ಸಿದ್ಧತೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿ, ’ರಾಷ್ಟ್ರಪತಿ ಭವನದ ಕಚೇರಿ ಸೂಚನೆಯಂತೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಸೆ.೧೯ರಂದು ಕಾರ್ಯಕ್ರಮ ಪಟ್ಟಿ ದೊರೆಯಲಿದೆ’ ಎಂದರು.
ಬೆಟ್ಟದಲ್ಲಿ ಸುಮಾರು ೨ ಸಾವಿರ ಜನರು ಸೇರುವಷ್ಟು ಸ್ಥಳಾವಕಾಶವಿದೆ. ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರೂ ಕಾರ್ಯಕ್ರಮ ವೀಕ್ಷಿಸಬಹುದು’ ಎಂದು ಮಾಹಿತಿ ನೀಡಿದರು.
ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಇದ್ದರು.