ದಸರಾ ಕ್ರೀಡಾಕೂಟ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಕ್ರಮ

ಸಂಜೆವಾಣಿ ನ್ಯೂಸ್
ಮೈಸೂರು : ಆ.11:- ದಸರಾ ಕ್ರೀಡಾ ಕೂಟವನ್ನು ಯಾವುದೇ ತೊಂದರೆಯಾಗದಂತೆ ಕ್ಪೀಡಾಪಟುಗಳಿಗೆ ಉತ್ತಮ ವ್ಯವಸ್ಧೆ ನೀಡುವುದರ ಮೂಲಕ ವ್ಯವಸ್ಧಿತವಾಗಿ ಆಯೋಜಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ರವರು ನಗರದ ಚಾಮುಂಡಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ನಂತರ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಕ್ರೀಡಾ ದಸರಾದಲ್ಲಿ ಯಾವುದಕ್ಕೂ ಕೊರತೆಯಾಗದೆ ವ್ಯವಸ್ಥಿತವಾಗಿ ಹಾಗೂ ಹಳೇ ವೈಭವ ಮರುಕರುಳಿಸುವಂತೆ ಯಶಸ್ವಿಯಾಗಿ ನಡೆಯಬೇಕು. ಕ್ರೀಡಾ ದಸರಾ ನಡೆಸಲು ಅವಶ್ಯವಿರುವ ಅನುದಾನ ಹಾಗೂ ಖರ್ಚುವೆಚ್ಚದ ಪೂರ್ಣ ಮಾಹಿತಿ ಪಡೆದುಕೊಂಡರು.
ಅದ್ದೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಗಮನವಹಿಸಬೇಕು. ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದರು.
ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸುಮಾರು 5 ಸಾವಿರ ಸ್ಪರ್ಧಿಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಬರುವುದರಿಂದ, ಎಲ್ಲರಿಗೂ ವಸತಿ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆಸಬೇಕು. ಜಿಲ್ಲಾಡಳಿತದ ಸಲಹೆ ಉತ್ತಮವಾಗಿದೆ ಎಂದರು.
ಸಭೆಯಲ್ಲಿ ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.
ದಸರಾ ಕ್ರೀಡಾ ಕೂಟ ವ್ಯವಸ್ಧಿತವಾಗಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಸಚಿವ ಬಿ ನಾಗೇಂದ್ರ ದಸರಾ ಕ್ರೀಡಾ ಕೂಟವನ್ನು ಯಾವುದೇ ತೊಂದರೆಯಾಗದಂತೆ ಕ್ಪೀಡಾಪಟುಗಳಿಗೆ ಉತ್ತಮ ವ್ಯವಸ್ಧೆ ನೀಡುವುದರ ಮೂಲಕ ವ್ಯವಸ್ಧಿತವಾಗಿ ಆಯೋಜಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ತಿಳಿಸಿದರು.