ದಸರಾ ಕ್ರೀಡಾಕೂಟ

(ಸಂಜೆವಾಣಿ ವಾರ್ತೆ)
ಲಕ್ಷ್ಮೇಶ್ವರ,ಸೆ12 : ತಾಲೂಕಿನ ಮಾಡಳ್ಳಿ ಗ್ರಾಮದ ಶ್ರೀ ಎನ್. ಜಿ. ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 2023-24ನೇ ಸಾಲಿನ ತಾಲೂಕ ಮಟ್ಟದ ದಸರಾ ಕ್ರೀಡಾಕೂಟಗಳು ಸೋಮವಾರ ಆರಂಭವಾದವು.
ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಮಾತನಾಡಿದ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಅವರು ಕ್ರೀಡಾಕೂಟಗಳು ಪರಸ್ಪರ ಬಾಂಧವ್ಯ ಭ್ರಾತೃತ್ವವನ್ನು ಬೆಸೆಯುವ ಸಾಧನವಾಗಿವೆ ಇಂದು ಯುವಕರು ಕೇವಲ ಕೆಲವೇ ಕೆಲವು ಆಟಗಳಲ್ಲಿ ಸೀಮಿತವಾಗಿದ್ದು ಗ್ರಾಮೀಣ ಕ್ರೀಡೆಗಳು ಮರೆಯಾಗುತ್ತಿವೆ ಈ ನಿಟ್ಟಿನಲ್ಲಿ ಸರ್ಕಾರ ಗ್ರಾಮೀಣ ಕ್ರೀಡಾಕೂಟಗಳನ್ನು ಸಂಘಟಿಸುವ ಮೂಲಕ ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರಲು ಪ್ರಯತ್ನಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವಜನ ಮತ್ತು ಸಬಲೀಕರಣ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕೆ ಆನಂದ್ ಶೀಲ್ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಮ್ ಮುಂದಿನ್ ಮನಿ ತಾಲೂಕ ಪಂಚಾಯಿತಿ ಮಾಜಿ ಸದಸ್ಯ ನಿಂಬಣ್ಣ ಮಡಿವಾಳರ ತಾಲೂಕ ಯುವಜನ ಮತ್ತು ಸಬಲೀಕರಣ ಇಲಾಖೆಯ ಸಿ . ವೈ ಮೇಲಿನಮನಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.