ದಸರಾ ವಿಶೇಷ ಏರ್ ಶೋಗೆ ರಕ್ಷಣಾ ಸಚಿವರಿಗೆ ಮನವಿ

ಸಿದ್ದು-ಮೋದಿ ಭೇಟಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿ ಮೈಸೂರು ಪೇಟ ತೊಡಿಸಿ ಸನ್ಮಾನಿಸಿ ಗೌರವಿಸಿದರು. ಬಳಿಕ ರಾಜ್ಯದ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ನವದೆಹಲಿ,ಆ.೩: ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಬೆಳಿಗ್ಗೆ ಸಂಸದ್ ಭವನದಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಸೌಹಾರ್ದಯುತ ಭೇಟಿ ಎಂದು ಹೇಳಲಾಗಿದ್ದು, ೨ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಈ ಸಂದಭದಲ್ಲಿ ಮುಖ್ಯಮಂತ್ರಿಗಳು ಪ್ರಧಾನಿಮೋದಿ ಅವರಿಗೆ ಗಂಧದ ಹಾರ ಹಾಕಿ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿದರು.
ರಾಜ್‌ನಾಥ್ ಮತ್ತು ನಿರ್ಮಲಾ ಸೀತಾರಾಮನ್ ಭೇಟಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾeನಾಥ್‌ಸಿಂಗ್ ಹಾಗೂ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದರು.
ದಸರಾ: ವಿಶೇಷ ಏರ್ ಶೋಗೆ ಮನವಿ ಕೆಂದ್ರ ಗೃಹ ಸಚಿವ ರಾeನಾಥ್‌ಸಿಂಗ್‌ರವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಏರ್ ಶೋವನ್ನು ಆಯೋಜಿಸುವಂತೆಯೂ ಮನವಿ ಮಾಡಿದರು. ೨೦೧೭ ಮತ್ತು ೨೦೧೯ ರಲ್ಲಿ ದಸರಾ ಸಂದರ್ಭದಲ್ಲಿ ವಾಯುಪಡೆ ವಿಶೇಷ ಏರ್ ಶೋ ವನ್ನು ನಡೆಸಿತ್ತು. ಅದೇ ರೀತಿ ಈಗಲೂ ದಸರಾ ಸಂದರ್ಭದಲ್ಲಿ ವಿಶೇಷ ಏರ್ ಶೋ ಆಯೋಜಿಸಿದರೆ ಅದು ದಸರಾಗೆ ಮತ್ತಷ್ಟು ಮೆರಗು ತರುತ್ತದೆ. ಈ ಬಗ್ಗೆ
ಸಂಬಂಧಿಸಿದವರಿಗೆ ಸೂಚನೆ ನೀಡಿ ದಸರಾ ಹಬ್ಬದಲ್ಲಿ ವಿಶೇಷ ಏರ್ ಶೋನಡೆಸಲು ಅಗತ್ಯ ಕ್ರಮಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದರು.