ದಾರಿ ಯಾವುದಯ್ಯ ‘ವೈಕುಂಠಕೆ’ ಯು/ಎ

ಶರಣಪ್ಪ ಎಂ ಕೊಟಗಿ ನಿರ್ಮಿಸಿರುವ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಚಿತ್ರ ವೀಕ್ಷಿಸಿದ ನಂತರ ಸೆನ್ಸಾರ್ ಮಂಡಳಿ ಸದಸ್ಯರು, ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಉತ್ತಮ‌ ಕಥೆ ಆಯ್ಕೆ ಮಾಡಿಕೊಂಡಿದ್ದೀರಿ ಎಂದು ನಿರ್ದೇಶಕರನ್ನು ಪ್ರಶಂಸಿಸಿದ್ದಾರೆ.

ಈ ವಿಷಯದಿಂದ ಸಂತಸಗೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಚಿತ್ರರಸಿಕರಿಗೂ ನಮ್ಮ ಸಿನಿಮಾ ಮೆಚ್ಚುಗೆಯಾಗಲಿದೆ ಎಂಬ ಭರವಸೆ ಹೊಂದಿದ್ದಾರೆ.

ಇತ್ತೀಚೆಗೆ ನಟ ಧೃವ ಸರ್ಜಾ ಅವರಿಂದ ಬಿಡುಗಡೆಯಾಗಿದ್ದ ಚಿತ್ರದ ಫಸ್ಟ್ ಲುಕ್ ಗೂ ಉತ್ತಮ‌ ಪ್ರತಿಕ್ರಿಯೆ ದೊರೆಕಿದೆ.

ವರ್ಧನ್ ನಾಯಕರಾಗಿ ನಟಿಸಿರುವ ಚಿತ್ರದ ತಾರಾಬಳಗದಲ್ಲಿ ಅನುಷ,’ತಿಥಿ’ ಚಿತ್ರದ ಖ್ಯಾತಿ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್

ಮುಂತಾದವರಿದ್ದಾರೆ.