ದಾಳಿ ಖಂಡನೀಯ: ಮನವಿ

ಹುಬ್ಬಳ್ಳಿ,ಏ5: ಸಂಯುಕ್ತ ಕಿಸಾನ ಮೋರ್ಚಾ ರಾಷ್ಟ್ರೀಯ ನಾಯಕ ರಾಕೇಶ ಟಿಕಾಯತ್ ಅವರ ಮೇಲೆ ರಾಜಸ್ತಾನದ ಅಲ್ವಾರದಲ್ಲಿ ನಡೆದ ದಾಳಿಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮೀತಿ ವತಿಯಿಂದ ನಗರದ ತಹಶೀಲ್ದಾರ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ತಹಶೀಲ್ದಾರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಪ್ರತಿಭಟನಾಕಾರರು ಟಿಕಾಯತ್ ಅವರ ಕಾರಿನ ಮೇಲೆ ದಾಳಿ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಅಲ್ಲದೆ ಕಳೆದ 4 ತಿಂಗಳಿಂದ ದೆಹಲಿಯಲ್ಲಿ ರೈತರು ಕೃಷಿ ಕಾಯ್ದೆ ಹಿಂಪಡೆಯಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ಸ್ಪಂದಿಸಿ ಕೇಂದ್ರ ಸರಕಾರ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರೈತ ಮುಖಂಡ ಸಿದ್ದಣ್ಣ ತೇಜಿ, ಬಾಬಾಜಾನ ಮುಧೋಳ,ಆರ್.ಲಕ್ಷ್ಮಣ, ಶಿವು ಅರಕೇರಿ, ಪೀರಜಾದೆ ಮುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.