ದಾವಣಗೆರೆಗೆ ಇದೇ ಮಾ.೨೫ ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಜಿಎಂಐಟಿ ಕಾಲೇಜಿನ ಪಕ್ಕದಲ್ಲಿರುವ ಜಾಗವನ್ನು ಸಂಸದ ಜಿ.ಎಂ ಸಿದ್ದೇಶ್ವರ್ ಪರಿಶೀಲಿಸಿದರು.ಈ ವೇಳೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ,ಯಶವಂತರಾವ್ ಜಾಧವ್,ಶಿವಕುಮಾರ್, ಬಿ.ಎಸ್ ಜಗದೀಶ್,ಶ್ರೀನಿವಾಸ ದಾಸಕರಿಯಪ್ಪ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.