ದಾವಣಗೆರೆಯಲ್ಲಿ ಸಂವಿಧಾನ ಬಚಾವೋ ಆಂದೋಲನ


ದಾವಣಗೆರೆ. ನ.೨೪; ಕಾಂಗ್ರೆಸ್ ಪಕ್ಷದಿಂದ ಭಾರತ್’ ಜೋಡೋ- ಸಂವಿಧಾನ ಬಚಾವೋ ಆಂದೋಲನವನ್ನು ದಾವಣಗೆರೆ ಜಿಲ್ಲೆಯಲ್ಲಿ ನವ 28ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ ಮಂಜಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ.೨೮ ರಂದು‌ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸುವುದರ ಮೂಲಕ ಆಂದೋಲನಕ್ಕೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ಅವರು ಚಾಲನೆ ನೀಡಲಿದ್ದಾರೆ. ಪಾದಯಾತ್ರೆಯು ಜಿಲ್ಲಾ ಕಾಂಗ್ರೆಸ್‌ ಕಛೇರಿಯವರೆಗೂ  ನಡೆಯಲಿದೆ ನಂತರ ಬಹಿರಂಗ ಸಭೆ ನಡೆಯಲಿದೆ.ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಬಿ.ಮಂಜಪ್ಪ ಅಧ್ಯಕ್ಷತೆ ವಹಿಸಲಿದ್ದು, ಕೆಪಿಸಿಸಿ ಎಸ್‌.ಸಿ. ವಿಭಾಗದ ರಾಜ್ಯಾಧ್ಯಕ್ಷರು, ವಿಧಾನಪರಿಷತ್‌ ಮಾಜಿ ಸದಸ್ಯರಾದ ಆರ್.ಧರ್ಮಸೇನಾ, ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಆಂದೋಲನದಲ್ಲಿ ಭಾಗವಹಿಸಲಿದ್ದಾರೆ.ಕಾಂಗ್ರೆಸ್ ಪಕ್ಷವೂ ಸ್ವಾತಂತ್ರ್ಯ ಪೂರ್ವ ಮತ್ತು ನಂತರ ದೇಶಾದ್ಯಂತ ಚಳುವಳಿ. ನಡೆಸಿದ ಕೀರ್ತಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ದೇಶವನ್ನು ಅಧೋಗತಿಗೆ ತಳ್ಳಿರುವ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕಾದ ಅಗತ್ಯವನ್ನು ಮನಗಂಡು ದೇಶಾದ್ಯಂತ ರಾಹುಲ್‌ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆಯನ್ನು ನಡೆಸುತ್ತಿದ್ದು, ಅತ್ಯಂತ ಯಶಸ್ವಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲೂ ಸಹ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ದಿನೇಸದ್ ಕೆ ಶೆಟ್ಟಿ,ಬಿ.ಹೆಚ್ ವೀರಭದ್ರಪ್ಪ,ಅನಿತಾಬಾಯಿ ಮಾಲತೇಶ್,ಆಯೂಬ್ ಪೈಲ್ವಾನ್,ಕೆ.ಜಿ ಶಿವಕುಮಾರ್, ನಂಜಾನಾಯ್ಕ್,ಡೋಲಿ ಚಂದ್ರು,ಸುಭಾನ್,ರಾಘವೇಂದ್ರ ಗೌಡ,ಹನುಮಂತಪ್ಪ ಮತ್ತಿತರರಿದ್ದರು.