ದಾವಣಗೆರೆಯ ಹರಿಹರ – ದಾವಣಗೆರೆ ಅರ್ಬನ್ ಸಮುದಾಯ ಭವನ, ದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆ ಜಿಲ್ಲೆಯ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ  ಹಾಗೂ ಸಂಸದರಾದ ಶೋಭಾ ಕರಂದ್ಲಾಜೆ, ದಾವಣಗೆರೆ ಬಿಜೆಪಿಯ ಜಿಲ್ಲಾಧ್ಯಕ್ಷರಾದ ವಿರೇಶ್ ಹನಗವಾಡಿ ಸಮ್ಮುಖದಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರದ ಸಂಭಾವಿತ ಆಭ್ಯರ್ಥಿಗಳ ಹೆಸರಿಗೆ, ವಿಧಾನ ಸಭಾ ಕ್ಷೇತ್ರದ ಶಕ್ತಿ ಕೇಂದ್ರದ ಪ್ರಮುಖರು, ಪ್ರಭಾರಿಗಳಿಂದ ಮತ ಹಾಕುವ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.