ದಾವಣಗೆರೆ ಉತ್ತರ ಕ್ಷೇತ್ರಕ್ಕೆ ಎಸ್ಸೆಸ್ಸೆಂ ನಾಮಪತ್ರವೇ ಮೊದಲು

ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗುರುವಾರ ನಾಮಪತ್ರ ಸಲ್ಲಿಸಿದರು. ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಾಮಪತ್ರವೇ ಕ್ಷೇತ್ರದಲ್ಲಿ ಮೊದಲ ನಾಮಪತ್ರ ಆಗಿದೆ.
ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿನ ಉಪ ಆಯುಕ್ತರು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ಕೆ.ಆರ್.ಶ್ರೀನಿವಾಸ್ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಏಪ್ರಿಲ್ 13ರಿಂದ ಅಂದರೆ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭದ ದಿನವಾಗಿದ್ದು ಮಲ್ಲಿಕಾರ್ಜುನ್ ಅವರು ಮೊದಲ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್, ಬಿ.ಹೆಚ್.ಅರವಿಂದ್ ಸೇರಿದಂತೆ ನಾಮಪತ್ರ ಸೂಚಕರು, ಅನುಮೋದಕರು ಇದ್ದರು.