ದಾವಣಗೆರೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ಜಿ. ಬಿ. ವಿನಯ್ ಕುಮಾರ್


ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೩; ದಾವಣಗೆರೆ ಲೋಕಸಭೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕನಸು ಇಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಹೇಳಿದರು.ತಾಲೂಕಿನ ದೊಗ್ಗಳ್ಳಿ, ದೊಡ್ಡ ಬೂದಿಹಾಳ್, ಅರಸಾಪುರ, ಕೋಡಿಹಳ್ಳಿ, ಚಿಕ್ಕಬೂದಿಹಾಳು, ದೊಡ್ಡಬಾತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಕೋಡಿಹಳ್ಳಿ ಗ್ರಾಮದಲ್ಲಿ ವಿನಯ್ ಕುಮಾರ್ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ನೂರಾರು ಸಂಖ್ಕೆಯಲ್ಲಿ ನೆರೆದಿದ್ದ ಗ್ರಾಮಸ್ಥರು ವಿನಯ್ ಕುಮಾರ್ ಪರ ಘೋಷಣೆ ಹಾಕಿದರು. ಈ ವೇಳೆ ಕೋಡಿಹಳ್ಳಿ ಗ್ರಾಮದ ಆನಂದ, ಕುಮಾರ, ದುರುಗೇಶ, ಹರೀಶ, ಮಧು, ಪ್ರದೀಪ ಮತ್ತಿತರರು ಹಾಜರಿದ್ದರು.