ದಾವಣಗೆರೆ ಜೂನ್ 14 ರವರೆಗೆ ಲಾಕ್‍ ಡೌನ್ ; ಅಗತ್ಯ ವಸ್ತು ಖರೀದಿಗೆ ಜೂ. 07, 09, 11ರಂದು ಅವಕಾಶ

santhe held in front of the Durgamba temple, city diety

ದಾವಣಗೆರೆ.ಜೂ05:ಜಿಲ್ಲೆಯಾದ್ಯಂತ ಜೂನ್ 14 ರವರೆಗೆ ಸಂಪೂರ್ಣ ಲಾಕ್ ಡೌನ್ ಮುಂದುವರಿಯಲಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಜೂ.07, 09 ಮತ್ತು ಜೂನ್ 11 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.
ಅಗತ್ಯ ವಸ್ತುಗಳಾದ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು, ತರಕಾರಿ, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳಿಗೆ ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಸತತವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಮಾಣ ತಗ್ಗಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದಾಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ.