ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಟಿಕೆಟ್ನೀಡುವಂತೆ ಉಮಾ ಪ್ರಕಾಶ್ ಮನವಿ

ದಾವಣಗೆರೆ.ಏ.೪: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಪಕ್ಷವು ಟಿಕೆಟ್ ನೀಡಬೇಕು ಎಂದು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಹಾಲಿ ಸದಸ್ಯೆ ಉಮಾ ಪ್ರಕಾಶ್ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಅರ್ಜಿ ಸಲ್ಲಿಸಿದ್ದಾರೆ.ದಕ್ಷಿಣ ಕ್ಷೇತ್ರದಲ್ಲಿ ಓಬಿಸಿ ಆಧಾರದಲ್ಲಿ ಟಿಕೆಟ್ ನೀಡುವುದಾದರೆ ತಮಗೆ ನೀಡಿ. ಮಹಿಳೆಯರಿಗೆ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಕಳೆದ ೨೦ ವರ್ಷಗಳಿಂದಲೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಬಿಜೆಪಿಯಿಂದ ಸ್ಪರ್ಧಿಸಲು ತಾನೂ ಆಕಾಂಕ್ಷಿಯಾಗಿದ್ದು, ಬಿ ಫಾರಂ ನೀಡುವಂತೆ ಮನವಿ ಸಲ್ಲಿಸಿದ್ದಾರೆ.೨೦೦೭ರಲ್ಲಿ ಬಿಜೆಪಿಯಿಂದ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿ ಒಂದು ವರ್ಷ ದಾವಣಗೆರೆ ಮಹಾನಗರಕ್ಕೆ ಮಹಾಪೌರಳಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿರುತ್ತೇನೆ. ಈ ವೇಳೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಪ್ರಸ್ತುತ ೨೦೧೯ ರಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡನೇ ಬಾರಿ ಮಹಾನಗರ ಪಾಲಿಕೆ ಸದಸ್ಯಳಾಗಿದ್ದೇನೆ. ಯೋಜನೆ ಮತ್ತು ಕಾಮಗಾರಿ ಸ್ಥಾಯಿ ಸಮಿತಿಯ ಅಧ್ಯಕ್ಷಳಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಅನುಭವವಿದ್ದು ೨೦೨೩ರ ಚುನಾವಣೆಗೆ ತಮಗೆ ಟಿಕೇಟ್ ನೀಡಬೇಕೆಂದು ಅವರು ವಿನಂತಿಸಿದ್ದಾರೆ.