ದಾವಣಗೆರೆ ದಕ್ಷಿಣದಿಂದ ಸ್ಪರ್ಧೆಗೆ ಅರ್ಜಿ; ಶಾಮನೂರು ಶಿವಶಂಕರಪ್ಪ

ದಾವಣಗೆರೆ.ನ.೧೭; ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕರ್ನಾಟಕದಲ್ಲಿ ಪಕ್ಷದ ಸಂಘಟನೆ ಬಗ್ಗೆ ಮುಂದೆ ನೋಡಬೇಕಾಗುತ್ತದೆ ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದವರೇ ಆಗಿರುವ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಸಂಘಟನೆ ಹೇಗಾಗಲಿದೆ ಎಂಬುದನ್ನ ಮುಂದೆ ನೋಡಬೇಕಾಗುತ್ತದೆ ಎಂದರು.ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸುವುದು ಹಿಂದಿನಿಂದಲೂ ಇದೆ. ಈಗಲೂ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅರ್ಜಿ ಸಲ್ಲಿಸಿರುವೆ. ಈವರೆಗೆ ಬೇರೆ ಯಾರೂ ಅರ್ಜಿ ಸಲ್ಲಿಸಿಲ್ಲ. ಮುಂದೆ ಸಲ್ಲಿಸಬಹುದು. ದಾವಣಗೆರೆ ಉತ್ತರದಲ್ಲಿ ಈವರೆಗೂ ಮಲ್ಲಿಕಾರ್ಜುನ್ ಅರ್ಜಿ ಸಲ್ಲಿಸಿಲ್ಲ. ಮುಂದೆ ಸಲ್ಲಿಸುವರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.