ದಾವಣಗೆರೆ ವಿವಿ ಸಿಬ್ಬಂದಿಗೆ ಕೋವಿಡ್ ಲಸಿಕೆ

ದಾವಣಗೆರೆ, ಏ.30;ಪ್ರಸ್ತುತ ಕೊರೊನಾ ವೈರಾಣುವಿನಿಂದಾದ ಸಾಂಕ್ರಾಮಿಕ ಖಾಯಿಲೆ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಸಕಾರದ ಆದೇಶ, ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ. ಸಮಸ್ಯೆ ಬಂದ ನಂತರ ಪರಿಹಾರಕ್ಕೆ ಪ್ರಯತ್ನಿಸುವ ಬದಲು ಸಮಸ್ಯೆ ಬಾರದಂತೆ ನೋಡಿಕೊಂಡರೆ ಆತಂಕ ಇರುವುದಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಹಲಸೆ ಹೇಳಿದರು.ದಾವಣಗೆರೆ ವಿಶ್ವವಿದ್ಯಾನಿಲಯದ ಕೋವಿಡ್ ಕಾರ್ಯಪಡೆ, ರಾಷ್ಟಿçÃಯ ಸ್ವಯಂ ಸೇವಾ ಯೋಜನೆ ಘಟಕ, ವಿವಿ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಇಲಾಖೆ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದ ಸಿಬ್ಬಂದಿಗೆ ಕೋವಿಡ್-19 ಲಸಿಕಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದಾವಣಗೆರೆ ವಿಶ್ವವಿದ್ಯಾನಿಲಯವು ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 110 ಜನರಿಗೆ ಲಸಿಕೆ ಹಾಕಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಕಲ ರೀತಿಯ ಪ್ರಯತ್ನ ಮಾಡಿದೆ. ಈಗಾಗಲೇ ಪರೀಕ್ಷೆ ಮುಂದುಡಿದ್ದು, ವಿದ್ಯಾರ್ಥಿಗಳನ್ನು ಅವರ ಊರಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಶಿಕ್ಷಣ, ಪರೀಕ್ಷಾ ಸಿದ್ಧತೆಯ ಮಾರ್ಗದರ್ಶನ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ಮೇಲ್ವಿಚಾರಣೆಗಾಗಿ ಶಿಕ್ಷಕರನ್ನು ನಿಯೋಜಿಸಿದ್ದು, ಅವರ ಸಂಪರ್ಕದಲ್ಲಿದ್ದು ನಿಗಾವಹಿಸಲಿದ್ದಾರೆ. ಇದೀಗ ಆರೋಗ್ಯ ಇಲಾಕೆಯ ಸಹಯೋಗದಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಿಬ್ಬಂದಿಯವರು ಇದರ ಪ್ರಯೋಜನ ಪಡೆಯಬೇಕೆಂದು ಸಲಹೆ ನೀಡಿದರು.ಜಿಲ್ಲಾ ಸರ್ವೇಕ್ಷಣಾದಿಕಾರಿ ಡಾ.ರಾಘವನ್ ಮಾತನಾಡಿ, ಸದ್ಯದ ಕೊರೊನಾ-19 ಎರಡನೇ ಅಲೆ ತೀವ್ರ ಗಂಭೀರವಾಗಿದ್ದು, ಅದರ ಸ್ವರೂಪ, ಹರಡುವಿಕೆ ಮಾರ್ಗಗಳು ತಿಳಿಯುತ್ತಿಲ್ಲ. ಆದ್ದರಿಂದ ಸರ್ಕಾರ ಸೂಚಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವುದು ಅನಿವಾರ್ಯ. ಅಲ್ಲದೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸ್ಯಾನಿಟೈಸರ್ ಬಳಸುವುದನ್ನು ದಿನಚರ್ಯೆ ಮಾಡಿಕೊಳ್ಳುವುದು ಸೂಕ್ತ. ಅನಗತ್ಯವಾಗಿ ತಿರುಗಾಡುವುದನ್ನು ನಿಲ್ಲಿಸಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕುಲಸಚಿವೆ ಪ್ರೊ.ಗಾಯಿತ್ರಿ ದೇವರಾಜ್, ಕೋವಿಡ್ ಅಧಿಕಾರಿ ಡಾ.ಆರ್. ಶರತ್, ಆರೋಗ್ಯ ಕೇಂದ್ರದ ಸಂಯೋಜನಾಧಿಕಾರಿ ಡಾ.ಎಂ.ಸAತೋಷಕುಮಾರ, ಎನ್‌ಎಸ್‌ಎಸ್ ಸಂಯೋಜನಾಇಕಾರಿ ಡಿ.ಎಚ್.ಗಿರೀಶ, ವಿವಿಧ ನಿಕಾಯಗಳ ಡೀನ್‌ರಾದ ಪ್ರೊ.ಜೆ.ಕೆ.ರಾಜು, ಪ್ರೊ.ಕೆ.ಬಿ.ರಂಗಪ್ಪ, ಪ್ರೊ.ಕೆ.ವೆಂಕಟೇಶ್ ಭಾಗವಹಿಸಿದ್ದರು.