
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎನ್‌ಎಸ್‌ಎಸ್ ಘಟಕ ಮತ್ತು ತೋಟಗಾರಿಕೆ ವಿಭಾಗದ ವತಿಯಿಂದ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಗಿಡ ನೆಟ್ಟು ಚಾಲನೆ ನೀಡಿದರು. ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ, ಕಲಾ ನಿಕಾಯದ ಡೀನ್ ಪ್ರೊ.ವೆಂಕಟರರಾವ್ ಪಲಾಟೆ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಪಾಳೇದ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕದ ನಿರ್ದೇಶಕ ಪ್ರೊ.ಯು.ಎಸ್.ಮಹಾಬಲೇಶ್ವರ, ಜಿಮ್ಖಾನಾ ಅಧ್ಯಕ್ಷ ಪ್ರೊ.ಆರ್.ಶಶಿಧರ, ತೋಟಗಾರಿಕೆ ವಿಭಾಗದ ಮುಖ್ಯಸ್ಥ ಕುಂದರಗಿ ಭಾಗವಹಿಸಿದ್ದರು.
