ದಿಂಗಾಲೇಶ್ವರಶ್ರೀ ಬಗ್ಗೆ ಹೆಚ್ಚು ಮಾತಿಲ್ಲ

ಹುಬ್ಬಳ್ಳಿ,ಏ 12: ದಿಂಗಾಲೇಶ್ವರ ಶ್ರೀಗಳ ಬಗ್ಗೆ ಹೆಚ್ಚೇನೂ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುನರುಚ್ಚರಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಈ ಹಿಂದೆಯೂ ಅದೇ ಮಾತು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ ಎಂದು ಸ್ಪಷ್ಟವಾಗಿ ನುಡಿದರು.
ನಾಮಪತ್ರ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ
ತಾವು ಇದೇ ದಿ. 15 ರಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯ ಮಟ್ಟದ ನಾಯಕರು ಉಪಸ್ಥಿತರಿರುತ್ತಾರೆ ಎಂದು ಅವರು ಹೇಳಿದರು.