ದಿಂಬಂ ಘಟ್ಟದಲ್ಲಿ ಕಾರಿನ ಮೇಲೆ ಲಾರಿ ಪಲ್ಟಿ: ಮೂವರು ಸಾವು

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.13-ಜಿಲ್ಲೆಯ ಗಡಿಭಾಗದಲ್ಲಿರುವ ತಮಿಳುನಾಡಿನ ದಿಂಬಂ ಘಾಟ್ ದಿಂಬಂನ 27 ನೇ ತಿರುವಿನಲ್ಲಿ ಕಾರಿನ ಮೇಲೆ ಕಬ್ಬು ತುಂಬಿದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಅವಘಢ ಸಂಭವಿಸಿದೆ.
ತಾಳವಾಡಿಯಿಂದ ಸತ್ಯಮಂಗಲದತ್ತ ಕಬ್ಬು ತುಂಬಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದಿಂಬಂನ 27ನೇ ತಿರುವಿನಲ್ಲಿ ಕಾರಿನ ಮೇಲೆ ಪಲ್ಟಿ ಆಗಿದೆ. ಲಾರಿ ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸತ್ಯಮಂಗಲಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅದೃಷ್ಟವಶಾತ್ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಹಾಸನೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.