ದಿಗಂತ್ ಜೊತೆ ಸೇರಿದ ನಿಧಿ

ನಟ ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ “ಎಡಗೈ ಅಪಘಾತಕ್ಕೆ ಕಾರಣ” ಚಿತ್ರಕ್ಕೆ ನಾಯಕಿಯಾಗಿ ನಿಧಿ ಸುಬ್ಬಯ್ಯ ಪ್ರವೇಶ ಮಾಡಿದ್ದಾರೆ. ಈ ಮೂಲಕ ಪಂಚರಂಗಿ ಜೋಡಿ ಮತ್ತೊಮ್ಮೆ ತೆರೆಯ ಮೇಲೆ ಒಂದಾಗಿದೆ.

ಹತ್ತು ವರ್ಷಗಳ ನಂತರ ದಿಗಂತ್ ನಾಯಕನಾಗಿ ನಟಿಸುತ್ತಿರುವ ಎಡಗೈ ಅಪಫಾತ ಚಿತ್ರದಲ್ಲಿ ನಿಧಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ನಿರ್ದೇಶಕ ಸಮರ್ಥ್ ಕಡ್ಕೋಳ್ ನಿಧಿ ಪಾತ್ರ ಪ್ರೇಕ್ಷಕರಿಗೆ ಪಕ್ಕ ಮನರಂಜನೆ ನೀಡುತ್ತದೆ ಅಂತಾ ಹೇಳಿದ್ದಾರೆ.

ಗುರುದತ್‌ ಗಾಣಿಗ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಸಮರ್ಥ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ವಿಶೇಷವಾದ ಕಥೆ ಹೊಂದಿದೆ. ಯಲಹಂಕ ಬಳಿ ಅಪಾರ್ಟ್‌ಮೆಂಟ್‌ ಒಂದರಲ್ಲಿ ಈ ಸಿನಿಮಾದ ಚಿತ್ರೀಕರಣ  ಆರಂಭವಾಗಿದೆ.

ದಿಗಂತ್‌ ಜೋಡಿಯಾಗಿ ನಾಯಕಿ ಧನು ಹರ್ಷ ನಟಿಸುತ್ತಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ ಪಾರ್ತವಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ.