
ಚಿತ್ರದುರ್ಗ.ಮೇ.24; ಚಿತ್ರದುರ್ಗ ತಾಲ್ಲೂಕು ತಂಬಾಕು ನಿಯಂತ್ರಣ ಕೋಶ ತಂಡವು ಚಿತ್ರದುರ್ಗ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳಿಗೆ ದಿಡೀರ್ ದಾಳಿ ಮಾಡಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳಲ್ಲಿ ತಂಬಾಕು ಉತ್ಪನ್ನದ ಮಾಹಿತಿ ಫಲಕಗಳು ಇಲ್ಲದಿರುವುದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿರುವುದು ಕಂಡುಬಂದಿದ್ದು, ತಂಬಾಕು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಿಯಮ 4ರ ಅಡಿಯಲ್ಲಿ 5 ಪ್ರಕರಣ ದಾಖಲಿಸಿ ರೂ. 1600/- ದಂಡ ವಸೂಲಿ ಮಾಡಲಾಯಿತು.ಚಿತ್ರದುರ್ಗ ತಾಲ್ಲೂಕು ತಂಬಾಕು ನಿಯಂತ್ರಣ ಕೋಶ ಸದಸ್ಯ ಕಾರ್ಯದರ್ಶಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆ ಕಡಿಮೆ ಮಾಡುವುದು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ)2003 ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು. ತಂಬಾಕು ಬಳಕೆಯನ್ನು ತ್ಯಜಿಸಲು ಸೇವೆಯನ್ನು ಒದಗಿಸುವುದು. ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿ ಅನುμÁ್ಠನ ಮಾಡಬೇಕು. ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷತೆ ದೃಷ್ಟಿಯಿಂದಾಗಿ ತಂಬಾಕು ಸೇವನೆಯಿಂದ ದೂರವಿರಬೇಕು ಎಂದರು.ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ, ರಂಗಾರೆಡ್ಡಿ, ಪೆÇೀಲಿಸ್ ಸಬ್ ಇನ್ಸ್‍ಪೆಕ್ಟರ್ ಯತೀಶ್ವರಪ್ಪ ಉಪಸ್ಥಿತರಿದ್ದರು.