ದಿನ್ನಿ ಶಾಲಾ ಪ್ರಾರಂಭೋತ್ಸವ: ಪಠ್ಯಪುಸ್ತಕ ವಿತರಣೆ

ರಾಯಚೂರು,ಜೂ.೧೧-
೨೦೨೩-೨೪ನೇ ಸಾಲಿನ ಶಾಲಾ ಪ್ರಾರಂಭೋತ್ಸವದಂದು ತಾಲೂಕಿನ ದಿನ್ನಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಶಾಲಾ ಸಿಬ್ಬಂದಿ ಹಾಗೂ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ವತಿಯಿಂದ ಮಕ್ಕಳನ್ನು ಶಾಲೆಗೆ ಆತ್ಮೀಯವಾಗಿ ಹೂ ಗುಚ್ಚ ಹಾಗೂ ಸಿಹಿ ನೀಡುವ ಮೂಲಕ ಸ್ವಾಗತಿಸಲಾಯಿತು.
ನಂತರ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಪಠ್ಯಪುಸ್ತಕಗಳನ್ನು ಶಾಲಾ ಮಕ್ಕಳಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ವೈ.ಹನುಮಂತ ನಾಯಕ ಅವರು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ನಂತರ ಅವರು ಮಾತನಾಡಿ, ಪಾಲಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳುಹಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸುವಲ್ಲಿ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕೆಂದು ಹೇಳಿದರು. ಅದರಂತೆ ಶಿಕ್ಷಕರಿಗೆ ಪ್ರೋತ್ಸಾಹ ನೀಡುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಲು ಮನವಿ ಮಾಡಿದರು.
ಬೆಳಗಿನ ಅವಧಿಯಲ್ಲಿ ಶಾಲಾ ಮಕ್ಕಳಿಂದ ದಿನ್ನಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೃಷ್ಣ ಕುಡಿ೯ಕರ್, ಎಸ್.ಡಿ.ಎಂ.ಸಿ.ಯ ಉಪಾಧ್ಯಕ್ಷ ವೆಂಕಟೇಶ್, ಸದಸ್ಯರಾದ ನರಸಪ್ಪ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು, ಮಕ್ಕಳು ಉಪಸ್ಥಿತರಿದ್ದರು.