ದಿನ, ದಿನಕ್ಕೂ ಕೊರೊನಾ ಹೆಚ್ಚಳ

ನವದೆಹಲಿ,ಡಿ.೯- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಇದು ಸಹಜವಾಗಿಯೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಆತಂಕಕ್ಕೆ ದೂಡಿದೆ.
ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೯,೪೧೯ ಸೋಂಕು ಕಾಣಿಸಿಕೊಂಡಿದ್ದು ೧೫೯ ಮಂದಿ ಸಾವನಪ್ಪಿದ್ದಾರೆ ಅಲ್ಲದೆ ಸೋಂಕಿನಿಂದ ಚೇತರಿಸಿಕೊಂಡು ೮,೨೫೧ ಮಂದಿ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯತನಕ ಒಟ್ಟಾರೆ ಸಂಖ್ಯೆ ೩,೪೬ ಕೋಟಿಗೆ ಏರಿಕೆಯಾಗಿದೆ. ಜೊತೆಗೆ ೩,೪೦,೯೭,೩೮೮ ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ಸೋಂಕಿನಿಂದ ಇದುವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ ೪,೭೪,೧೧೧ ಮಂದಿಗೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸಕ್ರಿಯ ಪ್ರಕರಣ ಏರಿಕೆ:
ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದ್ದ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣ ಮತ್ತೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ೯೪,೭೪೨ ರಷ್ಟು ಇದೆ .
ದಿನದಿಂದ ದಿನಕ್ಕೆ ಲಸಿಕೆ ನೀಡಿಕೆ ಪ್ರಮಾಣವು ಹೆಚ್ಚಾಗುತ್ತದೆ ದೇಶದಲ್ಲಿ ಇದುವರೆಗೂ ೧೩೦.೩೯ ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ.೦.೭೩ ರಷ್ಟು ಇದ್ದು ವಾರದ ಸರಾಸರಿ ಪ್ರಮಾಣ ೦.೭೪ ರಷ್ಟು ಇದೆ.
ಇದುವರೆಗೂ ದೇಶದಲ್ಲಿ ೬೫,೧೯ ಕೋಟಿ ಜನರಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ತಿಳಿಸಿದೆ.

ಶೇ.೯೮.೩೬ ರಷ್ಟು ಚೇತರಿಕೆ
ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಏರಿಳಿತವಾಗುತ್ತಿರುವ ನಡುವೆ ಚೇತರಿಕೆಯ ಪ್ರಮಾಣವೂ ಏರಿಳಿತವಾಗುತ್ತದೆ.
ಕೊರೊನಾ ಸೋಂಕಿನ ಒಟ್ಟು ಚೇತರಿಕೆ ಪ್ರಮಾಣ ಶೇ. ೯೮.೩೬ ರಷ್ಟು ಇದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.