ದಿನ, ದಿನಕ್ಕೂ ಸೋಂಕಿತರ ಸಂಖ್ಯೆ ಏರಿಕೆ

ನವದೆಹಲಿ, ಮಾ.೨೩- ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು. ಇಡೀ ದೇಶ ಆತಂಕಕ್ಕೆ ಒಳಗಾಗುವಂತಾಗಿದೆ.
ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ೪೦,೭೧೫ ಮಂದಿಗೆ ಸೋಂಕು ದೃಢಪಟ್ಟಿದೆ. ೧೯೯ ಮಂದಿ ಸಾವನ್ನಪ್ಪಿದ್ದು ೨೯,೭೮೫ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇಂದು ಬೆಳಗ್ಗೆ ೮ ಗಂಟೆಯವರೆಗೆ ದಾಖಲಾಗಿರುವ ಪ್ರಕರಣ ಸೇರಿದಂತೆ ದೇಶದಲ್ಲಿ ಇದುವರೆಗೂ ೧,೧೬,೮೬,೭೯೬ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಇದುವರೆಗೂ ದೇಶದಲ್ಲಿ ೧,೧೧,೮೧೨೫೩. ಮಂದಿ ಚೇತರಿಸಿಕೊಂಡಿದ್ದಾರೆ. ೧೯೯ ಮಂದಿ ಹೊಸದಾಗಿ ಸಾವನ್ನಪ್ಪಿರುವುದು ಸೇರಿದಂತೆ ದೇಶದಲ್ಲಿ ಇದುವರೆಗೆ ೧,೬೦,೧೬೬ ಮಂದಿ ಸಾವನ್ನಪ್ಪಿದ್ದಾರೆ.
ಸಕ್ರಿಯ ಪ್ರಕರಣ ಏರಿಕೆ;
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮತ್ತು ಸಕ್ರಿಯ ಪ್ರಕರಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ.
೩,೪೫,೩೩೭ ಮಂದಿ ಸಕ್ರಿಯ ಪ್ರಕರಣಗಳು ದೇಶದಲ್ಲಿ ಇವೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಸರಿಸುಮಾರು ಎರಡು ಲಕ್ಷಕ್ಕೂ ಅಧಿಕ ಮಂದಿಗೆ ಹೊಸದಾಗಿ ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರ, ಕರ್ನಾಟಕ, ದೆಹಲಿ, ಹರ್ಯಾಣ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ನಿತ್ಯ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

೪.೮೪ ಮಂದಿಗೆ ಲಸಿಕೆ
ದೇಶದಲ್ಲಿ ಇದುವರೆಗೆ ೪ ಕೋಟಿ ೮೪ ಲಕ್ಷ ಮಂದಿಗೆ ಬರುವ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ನಡುವೆಯೇ ಲಸಿಕೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಸಚಿವಾಲಯ ಎಂದು ಸಚಿವಾಲಯ ತಿಳಿಸಿದೆ.