ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ರಾಜ್ಯಪಾಲರ ಭೇಟಿ, ಸಾಂತ್ವಾನ

ಬೆಳಗಾವಿ 14.09.2022: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬೆಲ್ಲದ ಬಾಗೇವಾಡಿಯಲ್ಲಿರುವ ದಿವಂಗತ ಉಮೇಶ್ ಕತ್ತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಂತರ ಉಮೇಶ್ ಕತ್ತಿ ಅವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ, ದಿ.ಉಮೇಶ್ ಕತ್ತಿ ಅವರ ಪತ್ನಿ ಶೀಲಾ ಕತ್ತಿ ಅವರಿಗೆ ಸಾಂತ್ವಾನ ಹೇಳಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಮಾಜಿ ಸಂಸದ ಹಾಗೂ ಉಮೇಶ್ ಕತ್ತಿಯವರ ಸಹೋದರ ರಮೇಶ್ ಕತ್ತಿ ಅವರು ಉಮೇಶ್ ಕತ್ತಿ ಅವರು ನಡೆದು ಬಂದ ಹಾದಿ, ರಾಜಕೀಯದಲ್ಲಿ ತೊಡಗಿಸಿಕೊಂಡು ಅವರು ಮಾಡಿದ ಸಾಧನೆಗಳು ಹಾಗೂ ಅವರಿಗಿದ್ದಂತಹ ಸಾಮಾಜಿಕ ಕಳಕಳಿಯ ಬಗ್ಗೆ ರಾಜ್ಯಪಾಲರಿಗೆ ವಿವರಿಸಿದರು. ಈ ವೇಳೆ ರಾಜ್ಯಪಾಲರು ಉಮೇಶ್ ಕತ್ತಿ ಅವರ ಸೇವೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, , ಪುತ್ರ ನಿಖಿಲ್ ಕತ್ತಿ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.