ದಿವ್ಯಾಂಗ ನೌಕರರಿಗೆ ಮನೆಯಿಂದಲೇ ‌ಕರ್ತವ್ಯ ನಿರ್ವಹಣೆಗೆ ಅವಕಾಶ

ಕಲಬುರಗಿ:ಏ.20: ದೇಶದಲ್ಲಿ ಕರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ದಿವ್ಯಾಂಗ ನೌಕರರು ಕಛೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟ ಸಾಧ್ಯವೆಂದು ಪರಿಗಣಿಸಿ ಹಾಗೂ ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ದಿವ್ಯಾಂಗ ನೌಕರರ ಹಿತದೃಷ್ಟಿಯಿಂದ ಭಾರತ ಸರಕಾರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ, ಡಿಪಾರ್ಟ್ಮೆಂಟ್ ಆಫ್ ಪರ್ಸ್ನಲ್ ಮತ್ತು ಟ್ರೈನಿಂಗ್ ಮಾರ್ಗಸೂಚಿಗಳನ್ವಯ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿವ್ಯಾಂಗ ಅಧಿಕಾರಿಗಳು/ನೌಕರರು ಮನೆಯಿಂದಲೇ ಕಛೇರಿ ಕಾರ್ಯ ನಿರ್ವಹಿಸಲು ಆದೇಶಿಸಿರುತ್ತದೆ.

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ದಿವ್ಯಾಂಗ ನೌಕರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಕರೋನಾ ಹರಡದಂತೆ ಸರಕಾರ ನಿರ್ದೇಶಿಸಿದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಡಿಸೆಬಲ್ಡ ಹೆಲ್ಪಲೈನ್ ಪೌಂಡೆಷನನ ರಾಜ್ಯ ಸಂಯೋಜಕರಾದ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.