
ರಾಯಚೂರು,ಮಾ.೨೪- ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ರಾಯಚೂರು ಇವರು ವತಿಯಿಂದ ೨೦೨೨ ೨೩ನೇ ಸಾಲಿನ ತಾಲೂಕಿನ ವಿಶೇಷ ಅಗತ್ಯವುಳ್ಳ(ದಿವ್ಯಾಂಗ) ಮಕ್ಕಳಿಗೆ ಒಂದು ದಿನದ ಕ್ಷೇತ್ರ ಭೇಟಿ ಆಯೋಜನೆ ಮಾಡಲಾಗಿತ್ತು.
ಇಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಭಂಡಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್ ಮರಡ್ಡಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಕ್ಷೇತ್ರ ಭೇಟ್ಟಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಭಂಡಾರಿ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ ಸರ್ಕಾರದಿಂದ ಹಮ್ಮಿಕೊಂಡಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳುತ್ತ ಎಲ್ಲರಿಗೂ ಶುಭಕೋರಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಾನಾಧಿಕಾರಿಗಳ ಕಾರ್ಯಾಲಯದ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಶೇಷ ಸಂಪನ್ಮೂಲ ಶಿಕ್ಷಕರು ಮತ್ತು ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.