ದಿ. ಇಂದಿರಾಗಾಂಧಿ ಪುಣ್ಯ ಸ್ಮರಣೆ

ತುಮಕೂರು, ನ. ೨- ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಪುಣ್ಯ ಸ್ಮರಣೆ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಬಾಯಿ ಪಟೇಲ್ ಅವರ ಪುಣ್ಯ ಸ್ಮರಣೆ ಹಾಗೂ ಮಹರ್ಷಿ, ಆದಿಕವಿ ವಾಲ್ಮೀಕಿ ಅವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.
ಮೂವರು ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮಮದಲ್ಲಿ ಮುಖಂಡರಾದ ಟಿ.ಎಸ್.ನಿರಂಜನ್, ಹೆಚ್.ಸಿ.ಹನುಮಂತಯ್ಯ, ರೇವಣ್ಣಸಿದ್ದಯ್ಯ ಮಾತನಾಡಿ, ಮೂವರು ಗಣ್ಯರು ಸಮಾಜಕ್ಕೆ ನೀಡಿದ ಕೊಡುಗೆ, ಅದರ ಪ್ರಯೋಜನಗಳ ವಿವರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಂಜುನಾಥ್, ಶಿವಾಜಿ, ಶ್ರೀನಿವಾಸ್ ಪುಟ್ಟರಾಜು, ಅಂಬರೀಷ್, ರುದ್ರೇಶ್, ಸುಜಾತ, ನಟರಾಜು, ಗೀತಾರುದ್ರೇಶ್, ಗಿರಿಜಾಂಬ, ಮುಬೀನಾ, ಪ್ರಕಾಶ್, ಗೂಳರಿವೆ ನಾಗರಾಜು, ಜಾರ್ಜ್, ಸತೀಶ್ ಮತ್ತಿತರರು ಭಾಗವಹಿಸಿದ್ದರು.