ದಿ. ಇಂದಿರಾ ಗಾಂಧಿಯವರ ೧೦೩ನೇ ಜನ್ಮದಿನಾಚರಣೆ

ಮಂಗಳೂರು, ನ.೨೦- ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಿನ್ನೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ೧೦೩ನೇ ಜನ್ಮದಿನಾಚರಣೆಯ ಸಮಾರಂಭದ ನಡೆಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಮನಪಾ ವಿರೋಧ ಪಕ್ಷ ನಾಯಕ ಅಬ್ದುಲ್ ರವೂಫ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಶಶಿಧರ್ ಹೆಗ್ಡೆ, ಸುರೇಂದ್ರ ಕಂಬಳಿ, ಭಾಸ್ಕರ್ ಕೆ., ವಿಶ್ವಾಸ್ ಕುಮಾರ್ ದಾಸ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮನಪಾ ಸದಸ್ಯರು ಉಪಸ್ಥಿತರಿದ್ದರು.