`ದಿ ಎಂಡ್’ ನಲ್ಲಿ ಹನುಮಾನ್ ಚಾಲೀಸ    

ಕನ್ನಡ ಪ್ರಥಮ ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರ “ದಿ ಎಂಡ್”. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೇವಲ ಐದು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಪವನ್ ಕುಮಾರ್ ನಿರ್ದೇಶನದ “ದಿ ಎಂಡ್” ಚಿತ್ರದ ಹಾಡಿನಲ್ಲಿ ಹನುಮಾನ್ ಚಾಲೀಸದ ಲಿರಿಕಲ್ ವಿಡಿಯೋ ಮಹಾಶಿವರಾತ್ರಿಯಂದು ಬಿಡುಗಡೆಯಾಗಿದೆ

ನಿರ್ಮಾಪಕರಾದ ಶಿಲ್ಪ ಶ್ರೀನಿವಾಸ್, ಮಂಜುನಾಥ್, ಧರ್ಮಶ್ರೀ ಮಂಜುನಾಥ್, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ವೆಂಕಟೇಶ್ ಸೇರಿದಂತೆ ಹಲವು ಚಿತ್ರಕ್ಕೆ ಶುಭಹಾರೈಸಿದ್ದಾರೆ

ಈ ವೇಳೆ ಮಾತನಾಡಿದ ನಿರ್ದೇಶಕ ಪವನ್ ಕುಮಾರ್, ವಿಶೇಷ ಪಾತ್ರದಲ್ಲಿ ನಟಿಸಲು ಅನಂತನಾಗ್ ಜೊತೆ ಮಾತುಕತೆ ನಡೆಯುತ್ತಿದೆ. ಹದಿನೆಂಟು ಪುರಾಣಗಳನ್ನು ಆಧರಿಸಿ ಮಾಡುತ್ತಿರುವ  ಚಿತ್ರ, ಒಂಭತ್ತು ಭಾಷೆಗಳಲ್ಲಿ ಐದು ಭಾಗಗಳಲ್ಲಿ ಬರಲಿದೆ.

ಮೊದಲ ಭಾಗ.”ದಿ ಎಂಡ್” ಸರ್ವಕಾಲಿಕ ಸೂಪರ್ ಹೀರೋ ಹನುಮಂತನ ಮಹಿಮೆ ವರ್ಣಿಸುವ ಹನುಮಾನ್ ಚಾಲೀಸ ಹಾಡನ್ನು ಚಿತ್ರದಲ್ಲಿ ಬಳಸಿಕೊಂಡಿದ್ದೇವೆ.   ಐದು ಪ್ರಸಿದ್ದ ಶಿವ ದೇಗುಲಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿರುವುದು ವಿಶೇಷ. ಅರುಣ್ ಆಂಡ್ರ್ಯೂ ಸಂಗೀತ ನೀಡಿರುವ ಈ ಹಾಡನ್ನು ಮಧುಕುಮಾರ್ ಭಾವಪರವಶರಾಗಿ ಹಾಡಿದ್ದಾರೆ. ಮೇ ವೇಳೆಗೆ ಚಿತ್ರ ತೆರೆಗೆ ಬರಲಿದೆ ಎಂದರು.

ನಾಯಕ ರವಿಶೇಖರ್ ಮಾತನಾಡಿ ಕಥೆ ಚೆನ್ನಾಗಿದೆ. ಸೂಪರ್ ಹೀರೋ ಎಂದರೆ ವಿಶೇಷ ಶಕ್ತಿಯುಳ್ಳವನು ಎಂದು. ಚಿತ್ರದಲ್ಲಿ ನಾನು ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು

ನಾಯಕಿ ಪವಿತ್ರ, ವಿಶೇಷ ಪಾತ್ರದಲ್ಲಿ ನಟಿಸಲಿರುವ ನಟಿ ಚೈತ್ರಾ ಕೊಟ್ಟೂರ್, ಸಂಗೀತ ನಿರ್ದೇಶಕ ಅರುಣ್ ಆಂಡ್ರ್ಯೂ, ಗಾಯಕ ಮಧುಕುಮಾರ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ದಿ ಎಂಡ್” ಕುರಿತು ಮಾತನಾಡಿದರು