ದಿ.13ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಸವದಿ


ಹುಬ್ಬಳ್ಳಿ, ಜ 11: ಇದೆ ದಿ. 13 ರಂದು ಸಚಿವ ಸಂಪಟ ರಚನೆ ಸಾಧ್ಯತೆ ಇದ್ದು, ಅಂದು ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸುಳಿವು ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ಬಂದಿದ್ದಾರೆ. ಸದ್ಯ ಸಚಿವ ಸಂಪುಟದಲ್ಲಿ ಏಳು ಸ್ಥಾನಗಳು ಮಾತ್ರ ಖಾಲಿ ಇವೆ. ಸಂಪುಟಕ್ಕೆ ಏಳು ಜನರನ್ನು ಸೇರಿಸಿಕೊಳ್ಳುವ ತೀರ್ಮಾನವಾಗಿದೆ. ಆಕಾಂಕ್ಷಿಗಳಲ್ಲಿ ಯಾರನ್ನು ಸೇರಿಸುತ್ತಾರೆ, ಯಾರನ್ನು ಕೈಬಿಡುತ್ತಾರೆ ಎಂಬುದು ನನಗೆ ಮಾಹಿತಿ ಇಲ್ಲ ಎಂದರು.
ಬಹಳ ದಿನಗಳಿಂದಲೂ ಸಚಿವ ಸಂಪುಟ ವಿಸ್ತರಣೆ ಬಾಕಿ ಇತ್ತು. ಇದನ್ನು ಹೈಕಮಾಂಡ್ ಗಮನಿಸಿ ಅವಕಾಶ ಕಲ್ಪಿಸಿದೆ. ಆದ್ದರಿಂದ ಸಂಕ್ರಾಂತಿಗೆ ಎಲ್ಲವೂ ಒಳ್ಳೆಯದು ಆಗಲಿದೆ ಎಂದು ಸಚಿವ ಸವದಿ ವಿಶ್ವಾಸ ವ್ಯಕ್ತಪಡಿಸಿದರು.