ದಿ.15,16 ರಂದು ಅಭಾಮಾಧ್ವ ತತ್ವಜ್ಞಾನಿ ಸಮ್ಮೇಳನ

ಧಾರವಾಡ, ಸೆ.12: 15 ಹಾಗೂ 16 ರಂದು 29 ನೇ ಅಖಿಲ ಭಾರತ ಮಾಧ್ವ ತತ್ವಜ್ಞಾನಿ ಸಮ್ಮೇಳನ ಧಾರವಾಡ ಹಳಿಯಾಳ ರಸ್ತೆಯ ಎಂ. ಜಿ. ಹಿರೇಮಠ ಕಲ್ಯಾಣ (ರಪಾಟಿ) ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಾಧ್ಯಕ್ಷ ಹರ್ಷ ಡಂಬಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 15 ರಂದು ಮುಂಜಾನೆ 8 ಘಂಟೆಗೆ ಶೋಭಾಯಾತ್ರೆ ಹಳಿಯಾಳ ನಾಕಾದಿಂದ ಪ್ರಾರಂಭವಾಗುತ್ತದೆ. ನಂತರ ಕಾರ್ಯಕ್ರಮ ಉದ್ಘಾಟನೆ ನಡೆಯಲಿದ್ದು ಉತ್ತರಾಧಿಮಠಾಧಿಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಸೋಸಲೆ ವ್ಯಾಸರಾಜರ ಮಠಾಧೀಶರಾದ ಶ್ರೀ ವಿದ್ಯಾಶ್ರೀತೀರ್ಥ ಶ್ರೀಪಾದಂಗಳವರು ಹಾಗೂ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ದಿವ್ಯ ಸಾನಿಧ್ಯವನ್ನು ವಹಿಸುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಅರವಿಂದ ಬೆಲ್ಲದ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಪ್ರಮುಖ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಅದರಂತೆ ವೈದ್ಯಕೀಯ ತಪಾಸಣಾ ಶಿಬಿರ, ವಿದ್ವತ್ ಗೋಷ್ಠಿ, ಮಹಿಳಾ ಗೋಷ್ಠಿ, ಸಂವಾದ, ಯುವ ಗೋಷ್ಠಿ ಹಾಗೂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಿಟ್ಟಣ್ಣ ದೇಶಪಾಂಡೆ, ಹ.ವೆಂ. ಕಾಖಂಡಕಿ, ಕೃಷ್ಣ ದೇಶಪಾಂಡೆ, ಸಮೀರ ಜೋಶಿ ಸೇರಿದಂತೆ ಹಲವರು ಇದ್ದರು.