ದಿ. 18 ರಂದು ಪ್ರತಿಭಾ ಪುರಸ್ಕಾರ

ಹುಬ್ಬಳ್ಳಿ,ಸೆ16 : ಕರ್ನಾಟಕ ರಾಜ್ಯ ದೇವಾಂಗ ಸಂಘ ಬೆಂಗಳೂರು ಹಾಗೂ ಹುಬ್ಬಳ್ಳಿ ದೇವಾಂಗ ಕೇಂದ್ರೀಯ ಸಮಿತಿ ಇವರ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ನಗರದ ಗೋಕುಲ್ ರಸ್ತೆಯ ಚವ್ಹಾನ್ ಗ್ರೀನ್ ಗಾರ್ಡನ್ ನಲ್ಲಿ ಸೆ. 18 ರಂದು ಬೆ. 10.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ರವೀಂದ್ರ ಪಾಟೀಲ್ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 90 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಲ್ಲದೇ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆ.ಜಿ. ಬ್ಯಾಕೋಡಿ, ನಾಗೇಶ ಬಾಫರೆ, ಮುಕಂದೌಡ ಗುಗ್ರಿ, ದೀಪಕ್ ಕರಮರಿ, ಪ್ರವೀಣ ಪಾಟೀಲ್, ವೀರಣ್ಣ ನಿಂಬರಗಿ ಉಪಸ್ಥಿತರಿದ್ದರು