ದಿ. 19 ರಿಂದಶ್ರೀದಾನಮ್ಮದೇವಿ ದೇವಸ್ಥಾನದಲ್ಲಿಜಾತ್ರಾ ಮಹೋತ್ಸವ

ಬ್ಯಾಡಗಿ,ನ.14: ಪಟ್ಟಣದ ನೆಹರೂ ನಗರದಲ್ಲಿರುವ ಶ್ರೀದಾನಮ್ಮದೇವಿ ದೇವಸ್ಥಾನದಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ಇದೇ ದಿ.19 ರಿಂದ 23ರವರೆಗೆ ಬಹು ವಿಜೃಂಭಣೆಯಿಂದ ಜರುಗಲಿದೆ.
ದಿ.19 ರಂದು ಸಂಜೆ 5 ಗಂಟೆಗೆ ಹಾವೇರಿಯ ಸದಾಶಿವ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗೋಮಾತೆಯ ಪೂಜೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಸಂಜೆ 6ಗಂಟೆಗೆ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ದಿ.20 ರಂದು ಸಂಜೆ 7ಗಂಟೆಗೆ ಹುಬ್ಬಳ್ಳಿಯ ಡಾ.ಗುರುಸಿದ್ದರಾಜಯೋಗಿಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯ ಜರುಗಲಿದೆ.
ದಿ.21 ರಂದು ಬಾಳೇಹೊಸೂರಿನ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮುಂಜಾನೆ 10-30 ಗಂಟೆಗೆ ಸಾಮೂಹಿಕ ವಿವಾಹ ಹಾಗೂ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ, ಸಂಜೆ 6-30 ಗಂಟೆಗೆ ಬ್ಯಾಡಗಿಯ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಪಟ್ಟಣದ ಶಾಲಾ ಮುಖ್ಯೋಪಾಧ್ಯಾಯರು,ಪ್ರಾಚಾರ್ಯರಗೆ ಸನ್ಮಾನ ಸಂಜೆ 7-30 ಗಂಟೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ದಿ.22 ರಂದು ಹೂವಿನಶಿಗ್ಲಿಯ ಚನ್ನವೀರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಂಜೆ 7 ಗಂಟೆಗೆ ಚೊಚ್ಚಲ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಲಿದೆ.
ಮಹಿಳೆಯರಿಂದ ಮಹಾರಥೋತ್ಸವ:
ದಿ.23 ರಂದು ಮುಂಜಾನೆ 6 ಗಂಟೆಗೆ ಶ್ರೀದಾನಮ್ಮದೇವಿಗೆ ರುದ್ರಾಭಿಷೇಕ, ಮಧ್ಯಾಹ್ನ 12-30 ಗಂಟೆಗೆ ಮಹಾಪ್ರಸಾದ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಬೆಳ್ಳಿ ಪಲ್ಲಕ್ಕಿ ಮಹೋತ್ಸವ, 5 ಗಂಟೆಗೆ ಮಹಿಳೆಯರಿಂದ ಮಹಾರಥೋತ್ಸವ, ಸಂಜೆ 7 ಗಂಟೆಗೆ ಕಾರ್ತಿಕೋತ್ಸವ ಕಾರ್ಯಕ್ರಮಗಳು ನಂತರ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಸಮಿತಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.