ದಿ.20 ರಂದು ಅಭಿನಂದನಾ ಕಾರ್ಯಕ್ರಮ

ಬ್ಯಾಡಗಿ,ಮೇ19: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕಾ ಘಟಕದ ವತಿಯಿಂದ ಮೇ.20 ರಂದು ಮದ್ಯಾಹ್ನ 3 ಗಂಟೆಗೆ ಮೋಟೆಬೆನ್ನೂರಿನ ಬಿಆರ್‍ಇ ಸಭಾಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶ್ರಮಿಸಿದ ಪಕ್ಷದ ಮುಖಂಡರು ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಹಾಗೂ ಬ್ಯಾಡಗಿ ಮಂಡಲದ ವಿವಿಧ ಮೋರ್ಚಾದ ಪದಾಧಿಕಾರಿಗಳು ರೈತ ಮೋರ್ಚಾದ ಮುಖಂಡರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.