ದಿ. 23 ರಿಂದ ಕ್ರಿಕೆಟ್ ಪಂದ್ಯಾವಳಿ

ಹುಬ್ಬಳ್ಳಿ,ನ19: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ 60 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬಸವರಾಜ ಅಮ್ಮಿನಭಾವಿ ಗೆಳೆಯರ ಬಳಗದ ವತಿಯಿಂದ ಇಲ್ಲಿನ ನೆಹರೂ ಮೈದಾನದಲ್ಲಿ ನ. 23 ರಿಂದ 27 ರವರೆಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಗೆಳೆಯರ ಬಳಗದ ಬಸವರಾಜ ಅಮ್ಮಿನಬಾವಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 20 ರಂದು ಪಂದ್ಯಾವಳಿಯ ಟ್ರೋಫಿಯನ್ನು ದುರ್ಗದ ಬೈಲ್‍ನ ವೃತ್ತದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅನಾವರಣಗೊಳಿಸುವರು. ನ. 23 ರಂದು ಬೆಳಿಗ್ಗೆ 11 ಕ್ಕೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡುವರು ಎಂದರು.
ಈ ಪಂದ್ಯಾವಳಿಯಲ್ಲಿ ಪತ್ರಿಕಾರಂಗ, ಪೆÇೀಲಿಸ್, ಮಹಾನಗರ ಪಾಲಿಕೆ, ಹೆಸ್ಕಾಂ ಸೇರಿದಂತೆ ಒಟ್ಟು 22 ತಂಡಗಳು ಭಾಗವಹಿಸಲಿವೆ. ಈ ಪಂದ್ಯಾವಳಿ ಮುಖ್ಯ ಉದ್ದೇಶ ಯುವಕರನ್ನು ಕ್ರೀಡೆಯತ್ತ ಸೆಳೆಯುವುದು ಆಗಿದೆ ಎಂದು ತಿಳಿಸಿದರು.
ಕ್ರಿಕೆಟ್ ಟೂರ್ನಿಯಲ್ಲಿ ಗೆದ್ದ ತಂಡಗಳಿಗೆ ಮೊದಲ ಬಹುಮಾನವಾಗಿ 20000, ಆಕರ್ಷಕ ಟ್ರೋಪಿ, ಎರಡನೇ ಬಹುಮಾನ 10000 ಜೊತೆಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ದಿನಕ್ಕೆ ಐದು ಪಂದ್ಯ ಆಡಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಚಂದ್ರಶೇಖರ ಗೋಕಾಕ್, ಪರಶುರಾಮ ಪೂಜಾರ, ರಾಜು ಕೋರ್ಯಾನಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.