ದಿ.5 ರಂದು ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ


ಧಾರವಾಡ, ಅ 2: ನವೆಂಬರ್ 5 ಕ್ಕೆ 2022 ನೇ ಸಾಲಿನ ಪ್ರತಿಭಾ ಪುರಸ್ಕಾರ, ಸರ್ವ ಸದಸ್ಯರ ಸಾಮಾನ್ಯ ಸಭೆ ಹಾಗೂ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಸುಬ್ಬಾಪುರಮಠ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ಧನಗೌಡರ ಹೇಳಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಧಾರವಾಡ ನಗರದ ನೌಕರರ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು. ಅದರಂತೆ ಉಚಿತ ನೇತ್ರ ತಪಾಸಣಾ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆರ್.ಬಿ. ಲಿಂಗದಾಳ, ದೇವಿದಾಸ ಶಾಂತಿಕರ, ಗಿರೀಶ್ ಚೌಡಕಿ ಸೇರಿದಂತೆ ಹಲವರು ಇದ್ದರು.