ದಿ. 8 ರಂದು ಜಯಂತ್ಯೋತ್ಸವ

ಬಾದಾಮಿ, ಸೆ 5: ತಾಲೂಕಿನ ಸುಕ್ಷೇತ್ರ ಶಿವಯೋಗಮಂದಿರದ ಶ್ರೀ ಮದ್ವೀರಶೈವ ಶಿವಯೋಗಮಂದಿರ ಸಂಸ್ಥೆಯ ವತಿಯಿಂದ ಅಖಿಲ ಭಾರತ ವೀರಶೈವ ಮಹಾಸಭೆಯ ಹಾಗೂ ಶಿವಯೋಗಮಂದಿರ ಸಂಸ್ಥೆಯ ಸಂಸ್ಥಾಪಕರು, ಕಾರಣಿಕ ಯುಗಪುರುಷರಾದ ಪರಮಪೂಜ್ಯ ಹಾನಗಲ್ ಕುಮಾರ ಶಿವಯೋಗಿಗಳವರ 155 ನೇ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ಮೂರುಸಾವಿರ ಮಠದ ಪೀಠಾಧಿಪತಿಗಳು ಹಾಗೂ ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾದ ಪರಮಪೂಜ್ಯ ಡಾ. ಗುರುಸಿದ್ದರಾಜಯೋಗಿಂದ್ರ ಮಹಾಸ್ವಾಮಿಗಳ ಸನ್ನಿಧಾನದಲ್ಲಿ ಮತ್ತು ಪರಮಪೂಜ್ಯರ ಸಮ್ಮುಖದಲ್ಲಿ ಹಾಗೂ ವಟುಸಾಧಕರ ಉಪಸ್ಥಿತಿಯಲ್ಲಿ ಬರುವ ಸೆ.8 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಶಿವಯೋಗಮಂದಿರದ ಶ್ರೀ ಕುಮಾರೇಶ್ವರರ ಕರ್ತೃಗದ್ದುಗೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಿವಯೋಗಮಂದಿರದ ಸದ್ಭಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಸಾದವನ್ನು ಸ್ವೀಕರಿಸಲು ಶಿವಯೋಗಮಂದಿರ ಸಂಸ್ಥೆಯ ಪ್ರಕಟಣೆ ತಿಳಿಸಿದೆ.