ದಿ.8 ರಂದು ರೈತರಿಂದ ಪಾದಯಾತ್ರೆ

ಹುಬ್ಬಳ್ಳಿ,ಆ6: ಕರ್ನಾಟಕ ರೈತರ ಸಂಘ ಇವರ ವತಿಯಿಂದ ಹುಬ್ಬಳ್ಳಿ ಮಹಾನಗರದಲ್ಲಿ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇದೇ ದಿ. 8 ರಂದು ನಗರದಲ್ಲಿ ಬೃಹತ್ ಪಾದಯಾತ್ರೆ ಮಾಡಲಾಗುವುದು ಎಂದು ಕರ್ನಾಟಕ ರೈತರ ಸಂಘದ ಅಧ್ಯಕ್ಷರಾದ ಸಿದ್ಧರಾಜ ಕುಂದಗೋಳ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಂಜಾನೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಿಂದ ಚೆನ್ನಮ್ಮ ವೃತ್ತದವರೆಗೆ ಚಕ್ಕಡಿ, ಟ್ರಾಕ್ಟರ್, ಮುಖಾಂತರ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮಹಾದಾಯಿ ಕಾಮಗಾರಿ ಪೂರ್ಣಗೊಳಿಸುವುದು, ಬಗರಹುಕಂ ಕಾಯ್ದೆ ಅಡಿಯಲ್ಲಿ ರೈತರಿಗೆ ಹಕ್ಕುಪತ್ರ ನೀಡುವುದು, ಬೆಳೆ ವಿಮೆ ಪರಿಹಾರ ಸಂದಾಯ ಮಾಡುವುದು, ಕೃಷಿ ಕೂಲಿ ಕಾರ್ಮಿಕರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುವುದು, 2018-19 ರ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರ ಬಾಕಿ ಹಣ ಸಂದಾಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಾನಂದ ಹೊಸಳ್ಳಿ, ವೀರಣಗೌಡ ಪಾಟೀಲ್, ಯಲ್ಲಪ್ಪ ತಡಸದ, ಸೋಮಣ್ಣ ಸೇರಿದಂತೆ ಉಪಸ್ಥಿತರಿದ್ದರು.