ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ ನ.1 ರಿಂದ 10 ರವಗೆ ಪಟಾಕಿ ಮಾರಾಟಕ್ಕೆ ಅವಕಾಶ

ಬೆಂಗಳೂರು, ಅ.30- ರಾಜ್ಯದಲ್ಲಿ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ದೀಪಾವಳಿಯನ್ನು ಸರಳವಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮದೊಂದಿಗೆ ಹಬ್ಬನ್ನು ಆಚರಿಸುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ನವಂಬರ್ 1 ರಿಂದ 10 ರವರೆಗೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದು ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿಗಳನ್ನು ಪಾಲಿಸಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸೂಚಿಸಿದ್ದಾರೆ.

ಪರವಾನಿಗೆ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕ ಪ್ರದೇಶ ದಿಂದ ದೂರವಿರುವ ಬಯಲು ಪ್ರದೇಶದಲ್ಲಿ ಹಸಿರು ಪಟಾಕಿ ಮಾರಾಟ ಮಾಡುವ ಮಳಿಗೆ ತೆರೆಯುವಂತೆ ಸೂಚನೆ ನೀಡಲಾಗಿದೆ.

ಮಳಿಗೆ ಆರಂಭಿಸುವ ಸಮಯದಲ್ಲಿ ಎರಡು ಕಡೆ ಗಾಳಿ ಹಾಡುವ ವ್ಯವಸ್ಥೆ ಇರಬೇಕು ಒಂದು ಮಳೆಯಿಂದ ಮತ್ತೊಂದು ಮಳಿಗೆಗೆ ಆರು ಮೀಟರ್ ಅಂತರ ಇರಬೇಕು ಎನ್ನುವ ನಿಬಂಧನೆಯನ್ನು ಮಾರ್ಗಸೂಚಿಯಲ್ಲಿ ಸರ್ಕಾರ ಹೊರಡಿಸಿದೆ.

ಪ್ರತಿಯೊಂದು ಮಳಿಗೆಯಲ್ಲಿ ಅನುಮತಿ ಪಡೆದ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶನ ಮಾಡುವಂತೆ ನೋಡಿಕೊಳ್ಳಬೇಕು ಎಂದು ಕೂಡ ಮಾರ್ಗಸೂಚಿಯ ಆದೇಶದಲ್ಲಿ ತಿಳಿಸಲಾಗಿದೆ‌.

ಹಸಿರು ಪಟಾಕಿ ಮಾಡುವ ಮಳಿಗೆಗಳ ಸುತ್ತಮುತ್ತ ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಅಳವಡಿಸಿರಬೇಕು ಎನ್ನುವುದು ಸೇರಿದಂತೆ ಹಲವು ಷರತ್ತುಗಳನ್ನು ಮಾರ್ಗಸೂಚಿಯಲ್ಲಿ ಹೊರಡಿಸಿದೆ.

ಹಸಿರು ಪಟಾಕಿ ಮಾರಾಟ ಮಾಡುವ ಸಮಯದಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.