ದುಗ್ಗಮ್ಮನ ಜಾತ್ರೆಗೆ ದಿನಾಂಕ ನಿಗದಿಯಾಗಿಲ್ಲ


ದಾವಣಗೆರೆ,ಡಿ.6: ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆಯ ದಿನಾಂಕವನ್ನು ಇನ್ನೂ ನಿಗದಿ ಮಾಡಿಲ್ಲ ಎಂದು ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ಸ್ಪಷ್ಟಪಡಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ದುರ್ಗಾಂಭಿಕಾ ಜಾತ್ರೆ ಮಾರ್ಚ್ 15 ಮತ್ತು 16 ರಂದು ನಡೆಯಲಿದೆ ಎಂಬ ವದಂತಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಚನ್ನಬಸಪ್ಪ, ಜಾತ್ರೆಗೆ ಸಂಬಂಧಪಟ್ಟಂತೆ ದೇವಸ್ಥಾನ ಟ್ರಸ್ಟ್‌ ಸಭೆ ನಡೆಸಿಲ್ಲ. ಸಭೆ ನಡೆಸಿ ಈ ಬಗ್ಗೆ ಟ್ರಸ್ಟ್ನ ಅಧ್ಯಕ್ಷರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.