ದೆಹಲಿಯಲ್ಲಿ ಇಂಡಿಯಾ ಗುಡುಗು

ಕೇಜ್ರಿವಾಲ್ ಬಂಧನಕ್ಕೆ ಖಂಡನೆ, ಮೈತ್ರಿಕೂಟ ಬೃಹತ್ ರ್‍ಯಾಲಿ ಶಕ್ತಿ ಪ್ರದರ್ಶನ

ನವದೆಹಲಿ,ಮಾ.೩೧- ಲೋಕಸಭೆ ಚುನಾವಣೆ ಸಮಯದಲ್ಲಿ ವಿರೋಧ ಪಕ್ಷಗಳ ನಾಯಕರು ಹಾಗು ಮುಖ್ಯಮಂತ್ರಿಗಳ ವಿರುದ್ದ ಕೇಂದ್ರೀಯಾ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಗುಡುಗಿರುವ “ಇಂಡಿಯಾ” ಮೈತ್ರಿಕೂಟದ ಹಲವು ನಾಯಕರು ಕೇಂದ್ರ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಾಪಾಡುವಂತೆ ದೇಶದ ಜನರಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಎತ್ತಿಕಟ್ಟುತ್ತಿರುವ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ತಿರುಗಿ ಬಿದ್ದಿರುವ “ಇಂಡಿಯಾ” ಮೈತ್ರಿಕೂಟದ ನಾಯಕರು ಪ್ರಜಾಭುತ್ವ ಉಳಿದರೆ ಮಾತ್ರ ದೇಶ ಉಳಿಯಲದೆ. ಇದಕ್ಕಾಗಿ ಭ್ರಷ್ಟರನ್ನು ಸೇರಿಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಅದರ ನಾಯಕರಿಗೆ ತಕ್ಕಪಾಠ ಕಲಿಸಬೇಕು ಎಂದು ದೇಶ ಜನರಿಗೆ ಕರೆ ನೀಡಿದ್ದಾರೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ “ಇಂಡಿಯಾ ಮೈತ್ರಿಕೂಟ”ದ ಹಲವು ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಮಹಾ ರಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ವಾಧಿಕಾರಿ ಧೋರಣೆಯ ಸರ್ಕಾರವನ್ನು ಕೇಂದ್ರದಿಂದ ಕಿತ್ತೊಗೊಯಲು ದೇಶದ ಜನರಿಗೆ ಕರೆ ನೀಡಿದ್ದಾರೆ,
ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಹೋರಾಟದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆ ಉದ್ದವ್ ಠಾಕ್ರೆ ಬಣದ ಉದ್ದವ್ ಠಾಕೆ,ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್,ಎನ್ ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ. ಆರ್ ಜೆಡಿ ಮುಖ್ಯಸ್ಥ ತೇಜಸ್ವಿಯಾದವ್, ಪಿಡಿಪಿ ಮುಖ್ಯಸ್ಥೆ ಮೆಹಬೂಬ್ ಮುಫ್ತಿ, ಸಿಪಿಐಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಸೀತಾರಾಮ್ ಯಚೂರಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್, ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್, ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೇನ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ಮುಖ್ಯಮಂತ್ರಿ ಅವರಿಂದ್ ಕೇಜ್ರಿವಾಲ್ ಬಂಧನ ಮಾಡಿರುವ ಕ್ರಮವನ್ನು ಖಂಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದಬ್ಬಾಳಿಕೆ ಮತ್ತು ದೌರ್ಜನ್ಯ, ಸರ್ವಾಧಿಕಾರ ಕೊನೆಗಾಣಿಸಬೇಕಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕಿತ್ತೊಗೆಯಬೇಕಾಗಿದೆ ಎಂದು ಇಂಡಿಯಾ ಮೈತ್ರಿಕೂಟದ ಘಟಾನುಘಟಿ ನಾಯಕರು ಗುಡುಗಿದ್ದಾರೆ.
ಮಹಾ ರ್‍ಯಾಲಿಯಲ್ಲಿ ಮಾತನಾಡಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರಿ ಕುಟುಂಬದ ಅರ್ಥವೇ ಅರ್ಥವಾಗುತ್ತಿಲ್ಲ, ನಿಮ್ಮ ಕುಟುಂಬದ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕು. ಈಗ, ಅವರಿಗೆ ಬೇರೆ ಅಜೆಂಡಾ ಇಲ್ಲ, ಚುನಾವಣಾ ಬಾಂಡ್‌ಗಳ ವಿಷಯ ಬೆಳಕಿಗೆ ಬಂದಾಗಿನಿಂದ, ಬಿಜೆಪಿಯ ನಿಜವಾದ ಮುಖವನ್ನು ಜನರು ನೋಡುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿ ಎಂದರೆ ‘ಭ್ರಷ್ಟ ಜನತಾ ಪಕ್ಷ’, ಇತ್ತೀಚಿನ ದಿನಗಳಲ್ಲಿರುವ ಅಲ್ಲಿರುವ ಎಲ್ಲರೂ ಭ್ರಷ್ಟರದ್ದು … ಎಲ್ಲಾ ಭ್ರಷ್ಟರು ಈಗ ಬಿಜೆಪಿ ಸೇರುತ್ತಿದ್ದಾರೆ ಹಾಗಾಗಿ ಅದು ‘ಭ್ರಷ್ಟ ಜನತಾ ಪಕ್ಷ’ವಾಗಿ ಮಾರ್ಪಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಪಿಐಎಂ ನ ಪ್ರಧಾನ ಕಾರ್ಯದರ್ಶಿ ಡಿ. ರಾಜಾ, ಮೊದಲು ಜಾರ್ಖಂಡ್ ಹೇಮಂತ್ ಸೊರೇನ್ ಅವರನ್ನು ಬಲವಂತವಾಗಿ ಬಂಧಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ವಿರೋಧ ಪಕ್ಷಗಳ ಇಬ್ಬರು ಹಾಲಿ ಮುಖ್ಯಮಂತ್ರಿಯನ್ನು ಬಂಧಿಸುವ ಮೂಲಕ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಇದು ಖಂಡನೀಯ ಎಂದಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ವಿರೋಧ ಪಕ್ಷಗಳ ವಿರುದ್ಧ ಬಳಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರತ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ದೊಡ್ಡ ಸಂದೇಶವನ್ನು ರವಾನಿಸಲಿದೆ. ಈಗಿನ ಬಿಜೆಪಿ ಆಡಳಿತವನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದಿದ್ದಾರೆ.
ದೆಹಲಿಯ ಆಪ್ ಸರ್ಕಾರದ ಸಚಿವೆ ಅತಿಶಿ ಮಾತನಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ದೇಶಾದ್ಯಂತ ಜನರು ಬಂದಿದ್ದಾರೆ. ದೆಹಲಿಯ ಜನರು. ಅರವಿಂದ್ ಕೇಜ್ರಿವಾಲ್ ತಮ್ಮ ಜೀವನವನ್ನು ಬದಲಾಯಿಸಿದ್ದಾರೆ ಎಂದಿದ್ದಾರೆ.
ರಾಜ್ಯಸಭಾ ಸಂಸದ ಮತ್ತು ಜೆಎಂಎಂ ನಾಯಕ ಮಹುವಾ ಮಜಿ ಪ್ರತಿಕ್ರಿಯೆ ನೀಡಿ ಹೋರಾಟದಲ್ಲಿ ಕಲ್ಪನಾ ಸೊರೆನ್ ಸುನೀತಾ ಕೇಜ್ರಿವಾಲ್ ಕೂಡ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರೀಯ ಸಂಸ್ಥೆಗಳ ದುರುಪಯೋಗ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದೆ. ವಿರೋಧ ಪಕ್ಷದ ನಾಯಕರನ್ನು ಹತ್ತಿಕ್ಕಲು ಇಡಿ, ಸಿಬಿಐ ಮತ್ತು ಐಟಿ ನಿಯೋಜಿಸಲಾಗಿದೆ ಮತ್ತು ದೇಣಿಗೆ ಸಂಗ್ರಹಿಸಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ವಿಶ್ವದಲ್ಲಿ ಬಿಜೆಪಿಯವರಷ್ಟು ಸುಳ್ಳು ಯಾರೂ ಹೇಳಿಲ್ಲ… ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ವಿಶ್ವದಾದ್ಯಂತ ಬಿಜೆಪಿಯನ್ನು ಟೀಕಿಸಲಾಗುತ್ತಿದೆ ಎಂದಿದ್ದಾರೆ.

ಬಾರಿ ಬಿಗಿ ಭದ್ರತೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧನ ಮಾಡಿರುವ ಜಾರಿ ನಿರ್ದೇಶನಾಲಯದ ಕ್ರಮವನ್ನು ಖಂಡಿಸಿ ಇಂಡಿಯಾ ಮೈತ್ರಿಕೂಟದ ನಾಯಕರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ರಾಮಲೀಲಾ ಮೈದಾನ ಸೇರಿದಂತೆ ಅದಕ್ಕೆ ಹೊಂದಿಕೊಂಡ ರಸ್ತೆಗಳ ಸಂಪರ್ಕ ಕಲ್ಪಿಸುವ ಸ್ಥಳಗಳಲ್ಲಿ ಭಾರಿ ಬಿಗಿ ಭದ್ರತೆ ಒದಗಿಸಲಾಗಿತ್ತು.
ಇಂಡಿಯಾ ಮೈತ್ರಿಕೂಟದ ನಾಯಕರು ಹೋರಾಟದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಯಾವುದೇ ಅಹಿತರಕರೆ ಘಟನೆಗೆ ಅವಕಾಶ ಮಾಡಿಕೊಡಂತೆ ದೆಹಲಿ ಪೊಲೀಸರು ಎಚ್ಚರಿಕೆ ವಹಿಸಿ ಕಟ್ಟೆಚ್ಚರ ವಹಿಸಿದ್ದರು.